SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ
ಬೆಂಗಳೂರು: ಇನ್ನು ಮುಂದೆ ಎಸ್ಎಸ್ಎಲ್ಸಿ ಪರೀಕ್ಷೆ 625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆ ಬರೆಯುತ್ತಾರೆ. ಆದರೆ ಆ ಭಾಷೆಯ 100 ಅಂಕ ಪರಿಗಣೆ ಮಾಡುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ:
ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24
ತೃತೀಯ ಭಾಷೆಗೆ ಗ್ರೇಡ್ ನೀಡುತ್ತೇವೆ ಮತ್ತು ಇದರಲ್ಲಿ ಪಾಸ್, ಫೇಲ್ ಇರುವುದಿಲ್ಲ. ಹಿಂದಿ ಭಾಷೆ ಕಡ್ಡಾಯವಲ್ಲ. ಈ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯನವರು ಒಪ್ಪಿದ್ದಾರೆ ಎಂದು ಹೇಳಿದರು.
ತೃತೀಯ ಭಾಷೆಗೆ ಎಬಿಸಿಡಿ ಎಂದು ಗ್ರೇಡ್ ನೀಡುತ್ತೇವೆ. ಈ ವರ್ಷದ ಪರೀಕ್ಷೆಯಲ್ಲಿ ಈ ನಿಯಮವನ್ನು ಜಾರಿ ಮಾಡಲಾಗುವುದು. ಇಂದು ಸಂಜೆ ಒಳಗಡೆ ಆದೇಶ ಜಾರಿಯಾಗಲಿದೆ ಎಂದರು.
ಈ ವೇಳೆ ಉರ್ದು ಮಾಧ್ಯಮ ಶಾಲೆಗಳಲ್ಲಿ ಕನ್ನಡವನ್ನು ತೃತೀಯ ಭಾಷೆಯನ್ನಾಗಿ ಓದಿಸಲಾಗುತ್ತದೆ. ಇಲ್ಲಿ ಕನ್ನಡ ಇರುವುದಿಲ್ಲವೇ ಎಂಬ ಪ್ರಶ್ನೆಗೆ, ಇದಕ್ಕೆ ಒಂದು ನಿಯಮವನ್ನು ನಾವು ಮಾಡುತ್ತೇವೆ. ಕನ್ನಡ ವಿಷಯಕ್ಕೆ ಧಕ್ಕೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ:
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ – vishwanews24
