SSLC ಫಲಿತಾಂಶ – ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ – Vishwanews24
SSLC ಫಲಿತಾಂಶ – ಚಿತ್ರದುರ್ಗ ಜಿಲ್ಲೆ ಪ್ರಥಮ, ಹಾಸನ ದ್ವಿತೀಯ
ಬೆಂಗಳೂರು: 2022-23ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ, ಈ ಬಾರಿ ಶೇ.83.89ರಷ್ಟು ಫಲಿತಾಂಶ ದಾಖಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ರಾಜ್ಯದ 11 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್ ಇಎಬಿ ) ಪತ್ರಿಕಾಗೋಷ್ಟಿ ಫಲಿತಾಂಶ ಪ್ರಕಟಿಸಿದೆ.
ಚಿತ್ರದುರ್ಗ ಜಿಲ್ಲೆ ಶೇ 96.8% ರಷ್ಟು, ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದ್ದರೆ, ಮಂಡ್ಯ 96.74 ದ್ವಿತೀಯ , ಹಾಸನ ಮೂರನೇ ಸ್ಥಾನದಲ್ಲಿದೆ. ಯಾದಗಿರಿ ಶೇ 75.49 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಪ್ರತಿಶತ ಅಂಕ ಪಡೆದ ವಿದ್ಯಾರ್ಥಿಗಳು:
ಭೂಮಿಕಾ – ನ್ಯೂ ಮೆಕಾಲೆ ಇಂಗ್ಲಿಷ್ ಹೈಸ್ಕೂಲ್ ಹೊಸೂರು
ಯಶಶ್ ಗೌಡ – ಚಿಕ್ಕಬಳ್ಳಾಪುರ
ಅನುಪಮ ಶ್ರೀ ಶೈಲಿ – ಬೆಳಗಾವಿ
ಬೀಮನ್ ಗೌಡ ಹನುಮಂತ್ ಗೌಡ ಬೀರಾದಾರ್ ಪಾಟೀಲ್ – ಬಿಜಾಪುರ
ವಿದ್ಯಾರ್ಥಿಗಳು ಪಲಿತಾಂಶಕ್ಕಾಗಿ ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಅಥವಾ https://karresults.nic.in/ ಪಡೆಯಬಹುದು .
ಕಳೆದ ಬಾರಿ ಅಂದರೆ 2022 ರಲ್ಲಿ, ಒಟ್ಟಾರೆ ಉತ್ತೀರ್ಣ ಶೇಕಡಾ 85.63 ರಷ್ಟು ದಾಖಲಾಗಿತ್ತು.
