SSLC-PUC​ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ- ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆ , ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ – Vishwanews24

Featured, ರಾಜ್ಯ ನ್ಯೂಸ್

SSLC-PUC​ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ- ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆ , ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ

ಬೆಂಗಳೂರು: ಶಿಕ್ಷಕರ ದಿನಾಚರಣೆ ದಿನವೇ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.

2023-24ನೇ ಶೈಕ್ಷಣಿಕ ಸಾಲಿನಿಂದ SSLC, 2nd PUC ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಇದುವರೆಗೆ ವರ್ಷಕ್ಕೆ 2 ಪರೀಕ್ಷೆ ಮಾತ್ರ ನಡೆಸುತ್ತಿದ್ದ ಶಿಕ್ಷಣ ಇಲಾಖೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ.

ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನಧಾರಣೆ ವೃದ್ಧಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ತಮಿಳುನಾಡಿಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿಯ ಮೊಮ್ಮಗ ನಾನು , ಬೆದರಿಕೆಗಳಿಗೆ ಹೆದರುವುದಿಲ್ಲ : ಉದಯನಿಧಿ – Vishwanews24

ವೇಳಾಪಟ್ಟಿ

ಪರೀಕ್ಷೆ-1 ಮಾರ್ಚ್​​ 1ರಿಂದ ಮಾರ್ಚ್​ 25ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-2 ಮೇ 15ರಿಂದ ಜೂನ್​ 5ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-3 ಜುಲೈ 12ರಿಂದ ಜುಲೈ 30ರವರೆಗೆ ನಡೆಸಲು ನಿರ್ಧಾರ

10ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿ
ಪರೀಕ್ಷೆ-1: ಮಾರ್ಚ್​ 30ರಿಂದ ಏಪ್ರಿಲ್​ 15ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-2: ಜೂನ್​ 12ರಿಂದ ಜೂನ್​ 19ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-3: ಜುಲೈ 29ರಿಂದ ಆಗಸ್ಟ್​ 5ರವರೆಗೆ ನಡೆಸಲು ತೀರ್ಮಾನ

ವಿಧಾನಸಸೌಧದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದನ್ನು ಘೋಷಿಸಿದರು. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಶಾರುಖ್ ಖಾನ್ – VIshwanews24

ಒಟ್ಟು ಅಂಕ ಪೈಕಿ ಕನಿಷ್ಠ ಅಂಕಗಳನ್ನ ತೇರ್ಗಡೆ ಮಾನದಂಡವಾಗಿ ಪರಿಗಣನೆ ಮಾಡಲಾಗುತ್ತದೆ. ಕನಿಷ್ಠ ಅಂಕಗಳೊಂದಿಗೆ ವಿದ್ಯಾರ್ಥಿ ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿಗೆ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗುತ್ತದೆ. ಕಲಿಕಾ ಗುಣಮಟ್ಟ ಹಾಗೂ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಲು ಸರ್ಕಾರ ಈ ಹೊಸ ನಿಯಮವನ್ನು ಘೋಷಣೆ ಮಾಡಿದೆ

Leave a Reply