SSLC ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ -Vishwanews24

Featured, ರಾಜ್ಯ ನ್ಯೂಸ್

SSLC ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ -Vishwanews24

ಬೆಂಗಳೂರು : ಕೊರೊನಾ ವೈರಸ್ ಇಳಿಕೆಯಾಗುತ್ತಿರುವ ಕಾರಣ ಜುಲೈ ಅಂತ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಆಯೋಜಿಸುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲಾ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಶಿಕ್ಷಣ ಇಲಾಖೆ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಈ ಬಾರಿ ಬೇರೆ ಮಾದರಿಯ ಪ್ರಶ್ನೆ ಪತ್ರಿಕೆಗಳನ್ನು ನೀಡುತ್ತಿರುವ ಕಾರಣ ಗೊಂದಲ ಮೂಡದಿರಲೆಂದು ಶಿಕ್ಷಣ ಇಲಾಖೆ ತನ್ನ ಅಧಿಕೃತ ವೆಬ್ ಸೈಟ್ sslc.karnataka.gov.in ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಿದೆ.

ಮೂರು ದಿನಗಳ ಹಿಂದೆ ಗಣಿ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳ ಪ್ರಶ್ನೆ ಪತ್ರಿಕೆ ನೀಡಲಾಗಿತ್ತು. ಈಗ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯನ್ನೂ ಪ್ರಕಟಿಸಲಾಗಿದೆ. ಮಾದರಿ ಪ್ರಶ್ನೆ ಪತ್ರಿಕೆ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ, ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ, ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ನೀಡಲಾಗಿದೆ.

ಪ್ರತಿ ವಿಷಯಕ್ಕೆ ತಲಾ 40 ಅಂಕಗಳಂತೆ ಒಟ್ಟು 120 ಅಂಕದ 2 ಪ್ರಶ್ನೆ ಪತ್ರಿಕೆಗಳನ್ನು ಈ ಬಾರಿ ನೀಡಲಾಗುತ್ತಿದ್ದು, 3 ಗಂಟೆಗಳ ಕಾಲ ಪರೀಕ್ಷೆ ಜರುಗಲಿದೆ. ಪರೀಕ್ಷೆಯಲ್ಲಿ ಎಲ್ಲ ಪ್ರಶ್ನೆಗಳು ಬಹು ಆಯ್ಕೆಗೆ ಸಂಬಂಧಿಸಿದ್ದಾಗಿದ್ದು, ಉತ್ತರಗಳನ್ನು OMR ಶೀಟ್ ನಲ್ಲಿ ನಮೂದಿಸಬೇಕಾಗಿದೆ. ಇದಕ್ಕೆ ಸಂಬಂಧಿಸಿದಂತೆ ಒಎಮ್ ಆರ್ ಶೀಟ್ ಮಾದರಿಯನ್ನೂ ಇಲಾಖೆ ಪ್ರಕಟ ಮಾಡಿದೆ.