SSLCಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ,ಕ್ರಮ ಕೈಗೊಳ್ಳಲು ಸಿಎಂ ಸೂಚನೆ – vishwanews24

Featured, ರಾಜ್ಯ ನ್ಯೂಸ್

SSLCಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ,ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು : ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು, ನೋಟಿಸ್‌ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು.

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗಿನ ಎರಡನೇ ದಿನ ಸಭೆಯಲ್ಲಿ ಅವರು ಮಾತನಾಡಿದರು.

ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡುವವರನ್ನು ಕೆಲ ಸಂಘಟನೆಗಳು ರಕ್ಷಣೆ ಮಾಡುತ್ತಿವೆ : ದಿನೇಶ್‌ ಗುಂಡೂರಾವ್ – vishwanews24

ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ಎಸೆಸೆಲ್ಸಿಯಲ್ಲಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎನ್ನುವ ನೆಪ ಹೇಳಬೇಡಿ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಫಲಿತಾಂಶ ಬರುತ್ತಿದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆಯೇ ಅಥವಾ ಇಲ್ಲವೇ ಎನ್ನುವುದನ್ನು ಪರಿಶೀಲನೆ ನಡೆಸಬೇಕು. ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಿದರೆ, ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆ ಆಗದಂತೆ ಶಿಕ್ಷಕರು ಮತ್ತು ಅಧಿಕಾರಿಗಳು ಪೋಷಕರ ಜೊತೆ ಮಾತನಾಡಬೇಕು, ಡ್ರಾಪ್‌ಔಟ್‌ ತಡೆಯಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐ ಗಳು, ಬಿಇಒ ಗಳು ಶಾಲೆಗಳಿಗೆ ಭೇಟಿ ನೀಡ್ತಾ ಇದಾರಾ ಎನ್ನುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು. ಪ್ರತೀ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟ ಬೆಳವಣಿಗೆ. ಸರ್ಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್‌, ಸೂಪು, ಹಾಸ್ಟೆಲ್‌ ಸವಲತ್ತು ಎಲ್ಲಾ ಕೊಟ್ಟು ಮಕ್ಕಳ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ. ನಿಮ್ಮ ಪ್ರಾಯೋಗಿಕ ಅನುಭವಗಳು ಏನು ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮಕ್ಕೆ ಸಿಎಂ ಸೂಚಿಸಿದರು.

ಕೋವಿಡ್‌ ಹೆಚ್ಚಳ : ಆರೋಗ್ಯ ಇಲಾಖೆಯಿಂದ  ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ – vishwanews24

Leave a Reply