Featured

UDUPI : ಕಾಂಗ್ರೆಸ್  ದಿವಾಳಿ ಅಂಚಿಗೆ ತಲುಪಿದ್ದು , ರಾಜ್ಯದ ಜನರಿಗೆ ಖಾಲಿ ಚೆಂಬು ನೀಡುವ ದಿನ ದೂರವಿಲ್ಲ : ಕಿದಿಯೂರು ಉದಯಕುಮಾರ್ ಶೆಟ್ಟಿ – Vishwanews24

ಕಾಂಗ್ರೆಸ್  ದಿವಾಳಿ ಅಂಚಿಗೆ ತಲುಪಿದ್ದು , ರಾಜ್ಯದ ಜನರಿಗೆ ಖಾಲಿ ಚೆಂಬು ನೀಡುವ ದಿನ ದೂರವಿಲ್ಲ : ಕಿದಿಯೂರು ಉದಯಕುಮಾರ್ ಶೆಟ್ಟಿ

ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರದ ಜಾಹೀರಾತುಗಳಲ್ಲಿ ಬಿಜೆಪಿ ಕರ್ನಾಟಕದ ಜನತೆಗೆ ಚೆಂಬು ನೀಡಿದೆ ಎಂದು ಪ್ರಚಾರ ಮಾಡುತ್ತಿರುವುದು, ಕಾಮಾಲೆ ಕಣ್ಣಿನವರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಶ್ರೀ ಕಿದಿಯೂರು ಉದಯಕುಮಾರ್ ಶೆಟ್ಟಿ ವ್ಯಂಗ್ಯ ಮಾಡಿದ್ದಾರೆ.
ಅವರು ಉಡುಪಿ ವಿಧಾನಸಭಾ ಕ್ಷೇತ್ರದ ದೊಡ್ಡಣಗುಡ್ಡೆಯ ಮಣೋಲಿಗುಜ್ಜಿಯಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸ್ವಾತಂತ್ರ ಬಂದು ನಾಲ್ಕು ತಲೆಮಾರುಗಳ ಆಡಳಿತ ನಡೆಸಿದ ಕಾಂಗ್ರೆಸ್ ಗೆ ಕನಿಷ್ಠ ಶೌಚಾಲಯ ನಿರ್ಮಾಣ ಮಾಡಲು ಸಾಧ್ಯವಾಗದೇ ಜನರ ಕೈಗೆ ಚೆಂಬು ನೀಡಿದ್ದು ಇದೇ ಕಾಂಗ್ರೆಸ್, ಬಿಜೆಪಿ ತನ್ನ ಆಡಳಿತದಲ್ಲಿ 12 ಕೋಟಿ ಕುಟುಂಬಗಳಿಗೆ ಶೌಚಾಲಯ ನೀಡಿದೆ.
ದೇಶದ ಹಣವನ್ನು ಲೂಟಿ ಹೊಡೆದು ಸ್ವಿಸ್ ಬ್ಯಾಂಕ್ ನಲ್ಲಿ ಕೂಡಿಟ್ಟು, ದೇಶದ ಜನತೆಗೆ ಚೆಂಬು ನೀಡಿದ್ದು ಇದೇ ಕಾಂಗ್ರೆಸ್.ಅದನ್ನು ತಂದರೆ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಬರುತ್ತೆ.ಬೆಳೆ ಪರಿಹಾರ ಹಿಂದಿನ ಕೇಂದ್ರದಲ್ಲಿ ಕಾಂಗ್ರೆಸ್  ಸರಕಾರ ಇದ್ದಾಗ ಎಷ್ಟು ನೀಡಿದೆ , ಬಿಜೆಪಿ ಸರಕಾರ ಇದ್ದಾಗ ಎಷ್ಟು ನೀಡಿದೆ ಎಂಬುದನ್ನು ಅಂಕಿ ಅಂಶ ತೆಗೆದು ನೋಡಿ ಆಗ ಯಾರು ಯಾರಿಗೆ ಚೆಂಬು ನೀಡಿದ್ದು ಎಂಬುದರ ಅರಿವಾಗುತ್ತೆ. ರಾಜ್ಯದ ಕಾಂಗ್ರೆಸ್ ಸರಕಾರ ದಿವಾಳಿ ಅಂಚಿಗೆ ತಲುಪಿದ್ದು , ರಾಜ್ಯದ ಜನರಿಗೆ ಖಾಲಿ ಚೆಂಬು ನೀಡುವ ದಿನ ದೂರವಿಲ್ಲ ಎಂದು ಅವರು ಹೇಳಿದರು.
ಶಾಸಕರಾದ ಶ್ರೀ ಯಶಪಾಲ್  ಸುವರ್ಣ ಪ್ರಬುದ್ಧರ‌ ಪ್ರಕೋಷ್ಠದ  ‌ರಾಜ್ಯ ಸಮಿತಿ ಸದಸ್ಯ ರಾಧಕೃಷ್ಣ ಶೆಟ್ಟಿ ದೊಡ್ಡಣಗುಡ್ಡೆ , ಜಿಲ್ಲಾ ವಕ್ತಾರ ವಿಜಯ್ ಕುಮಾರ್ ಉದ್ಯಾವರ, ಪ್ರಮುಖರಾದ ಮಧುಕರ ಮುದ್ರಾಡಿ, ದಿನೇಶ್ ಅಮೀನ್,  ಡಾ. ರವೀಂದ್ರ , ಸುಂದರ್ ಅಮೀನ್,  ನವೀನ್ ರಾವ್, ಮುರಳೀಧರ ಕುಂದರ್ , ಸುಭಾಷಿತ್ ಕುಮಾರ್ ಮುಂತಾದವರಿದ್ದರು.
ಪ್ರಶಾಂತ್ ಭಟ್ ಪೆರಂಪಳ್ಳಿ ಸ್ವಾಗತಿಸಿ,  ಶಂಕರ್ ಕುಲಾಲ್ ವಂದನಾರ್ಪಣೆ ಮಾಡಿದರು.
Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

56 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago