Featured

Udupi : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಯಶ್ಪಾಲ್ ಸುವರ್ಣ ಅವಿರೋಧವಾಗಿ ಪುನರಾಯ್ಕೆ – vishwanews24

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಯಶ್ಪಾಲ್ ಸುವರ್ಣ ಅವಿರೋಧವಾಗಿ ಪುನರಾಯ್ಕೆ

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

ಬ್ಯಾಂಕಿನ 2023-28 ನೇ ಸಾಲಿನ 5 ವರ್ಷಗಳ ಅವಧಿಯ ಅಡಳಿತ ಮಂಡಳಿಗೆ ಎಲ್ಲಾ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು,

ಬ್ಯಾಂಕಿನ ಉಪಾಧ್ಯಕ್ಷರಾಗಿ ವಾಸುದೇವ ಸಾಲ್ಯಾನ್, ನಿರ್ದೇಶಕರಾಗಿ ಕೆ ಸಂಜೀವ ಶ್ರೀಯಾನ್, ವೆಂಕಟರಮಣ ಕಿದಿಯೂರು, ಶಶಿಕಾಂತ ಬಿ ಕೋಟ್ಯಾನ್, ಶೋಭೇಂದ್ರ, ವಿನಯ ಕರ್ಕೇರ, ನಾರಾಯಣ ಟಿ ಅಮೀನ್, ರಾಮ ನಾಯ್ಕ್ ಎಚ್, ಶಿವರಾಮ ಕುಂದರ್, ಸುರೇಶ ಬಿ ಕರ್ಕೇರ, ಸದಾನಂದ ಬಳ್ಕೂರು, ವನಜ ಹೆಚ್ ಕಿದಿಯೂರು, ವನಜ ಜೆ ಪುತ್ರನ್, ಮನೋಜ್ ಆಯ್ಕೆಯಾಗಿದ್ದಾರೆ.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದ್ದು, 2022-23 ನೇ ಸಾಲಿನಲ್ಲಿ ಬ್ಯಾಂಕ್ 9,464 ಕೋಟಿ ವಾರ್ಷಿಕ ವಹಿವಾಟು ನಡೆಸಿದ್ದು, ಕಳೆದ 14 ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ ಶೇಕಡಾ 18% ಡಿವಿಡೆಂಡ್ ನೀಡುವ ಕರಾವಳಿ ಕರ್ನಾಟಕದ ಏಕೈಕ ಪಟ್ಟಣ ಸಹಕಾರ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2008 ರಿಂದ ಬ್ಯಾಂಕಿನ ನಿರ್ದೇಶಕರಾಗಿ ನಿರಂತರವಾಗಿ ಸೇವೆ ಸಲ್ಲಿಸಿರುವ ಯಶ್ ಪಾಲ್ ಸುವರ್ಣ 2018 ರಲ್ಲಿ ಬ್ಯಾಂಕಿನ ಅಧ್ಯಕ್ಷರಾಗಿ ಸಂಸ್ಥೆಯ ಸಾರಥ್ಯ ವಹಿಸಿ ಬ್ಯಾಂಕ್ ಸರ್ವಾಂಗೀಣ ಪ್ರಗತಿ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿ ಇದೀಗ ಮತ್ತೊಮ್ಮೆ ಬ್ಯಾಂಕಿನ ಅಧ್ಯಕ್ಷರಾಗಿ ಸಂಸ್ಥೆಯನ್ನು ಮುನ್ನಡೆಸಲಿದ್ದಾರೆ.

2014 ರಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ, ಹಲವಾರು ಸಹಕಾರಿ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಯಶ್ ಪಾಲ್ ಸುವರ್ಣ ತಮ್ಮ ಸಹಕಾರ ಕ್ಷೇತ್ರದ ಸಾಧನೆಗಾಗಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ 2022 ನೇ ಸಾಲಿನ ಸಹಕಾರ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಸಹಕಾರ ರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ, ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಮೀನುಗಾರಿಕೆ ಕ್ಷೇತ್ರದಲ್ಲಿ ತಮ್ಮ ಕಾರ್ಯವೈಖರಿಯಿಂದ ಗುರುತಿಸಿಕೊಂಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago