Featured

Ukraine Russia War : ಕರ್ನಾಟಕದಲ್ಲಿ ಸೂರ್ಯಕಾಂತಿ ಅಡುಗೆ ಎಣ್ಣೆ ಬೆಲೆ  100 ರೂ. ಹೆಚ್ಚಳ -Vishwanews24

ರಷ್ಯಾ -ಉಕ್ರೇನ್ ಯುದ್ಧ ಪರಿಣಾಮ : ಕರ್ನಾಟಕದಲ್ಲಿ ಸೂರ್ಯಕಾಂತಿ ಅಡುಗೆ ಎಣ್ಣೆ ಬೆಲೆ  100 ರೂ. ಹೆಚ್ಚಳ -Vishwanews24

ಬೆಂಗಳೂರು: ರಷ್ಯಾ -ಉಕ್ರೇನ್ ಯುದ್ಧದ ಪರಿಣಾಮ ದೇಶೀಯ ಮಾರುಕಟ್ಟೆ ಮೇಲೆ ಉಂಟಾಗಿದೆ. ಯುದ್ಧ ಆರಂಭವಾಗಿ 12 ದಿನಗಳಾಗಿದ್ದು, ಕಾಳಸಂತೆಕೋರರು ಪರಿಸ್ಥಿತಿಯ ಲಾಭ ಪಡೆದುಕೊಂಡಿದ್ದು, ಸೂರ್ಯಕಾಂತಿ ಅಡುಗೆ ಎಣ್ಣೆ ದರವನ್ನು ಒಂದು ವಾರದಲ್ಲಿ 100 ರೂಪಾಯಿ ಹೆಚ್ಚಳ ಮಾಡಿದ್ದಾರೆ.

ಕೃತಕ ಅಭಾವ ಸೃಷ್ಟಿಸಿ ಸೂರ್ಯಕಾಂತಿ ಎಣ್ಣೆ ದರದಲ್ಲಿ 100 ರೂಪಾಯಿ ಹೆಚ್ಚಳ ಮಾಡಲಾಗಿದೆ. ಒಂದು ವಾರದಲ್ಲಿ ಸೂರ್ಯಕಾಂತಿ ಎಣ್ಣೆ 100 ರೂಪಾಯಿಯಷ್ಟು ಹೆಚ್ಚಾಗಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ವಾರದ ಹಿಂದೆ ಒಂದು ಲೀಟರ್ ಸೂರ್ಯಕಾಂತಿ ಎಣ್ಣೆ 110 ರಿಂದ 140 ರೂಪಾಯಿವರೆಗೂ ಮಾರಾಟವಾಗುತ್ತಿತ್ತು. ಒಂದು ವಾರದ ನಂತರ ಈಗ 170 ರೂಪಾಯಿಯಿಂದ 220 ರೂಪಾಯಿವರೆಗೂ ಮಾರಾಟವಾಗುತ್ತಿದೆ. ಯುದ್ಧದ ಹೆಸರಲ್ಲಿ ಕಾಳಸಂತೆಕೋರರು ಅಡುಗೆ ಎಣ್ಣೆ ದಾಸ್ತಾನು ಮಾಡಿಕೊಳ್ಳತೊಡಗಿದ್ದು, ಕೃತಕ ಅಭಾವ ಸೃಷ್ಟಿಸಿ ಬೆಲೆ ಏರಿಕೆ ಮಾಡತೊಡಗಿದ್ದಾರೆ ಎನ್ನಲಾಗಿದೆ.

ದೇಶದಲ್ಲಿ 2 -3 ತಿಂಗಳಿಗಾಗುವಷ್ಟು ಅಡುಗೆ ಎಣ್ಣೆ ದಾಸ್ತಾನು ಇದ್ದರೂ ಕೂಡ ಸೂರ್ಯಕಾಂತಿ ಎಣ್ಣೆಯಲ್ಲಿ ಕೃತಕ ಅಭಾವ ಸೃಷ್ಟಿಸಿ ಈ ರೀತಿ ಬೆಲೆ ಏರಿಕೆ ಮಾಡಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಯುದ್ಧದ ಪರಿಣಾಮ ಸೂರ್ಯಕಾಂತಿ ಎಣ್ಣೆ ಆಮದು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ದರ ಏರಿಕೆಯಾಗಿದೆ.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

19 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

21 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

21 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

21 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

21 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago