Union Budget 2021 : ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ , ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ -Vishwanews24

Featured, ರಾಷ್ಟ್ರ ನ್ಯೂಸ್

Union Budget 2021 : ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ , ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ -Vishwanews24

ನವದೆಹಲಿ:  2021 ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಅವರು ಮಂಡನೆ ಮಾಡುತ್ತಿದ್ದಾರೆ.

ಬಜೆಟ್ ಮಂಡನೆ ವೇಳೇಯಲ್ಲಿ , ರೈತರ ಆದಾಯ ಐದು ಪಟ್ಟು ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಬದ್ಧ, ಕೃಷಿವಲಯ ಚೇತರಿಕಗೆ ಕೇಂದ್ರದಿಂದ ಹೊಸ ಯೋಜನೆ. ಪ್ರಸಕ್ತ ವರ್ಷ ಗೋಧಿ ಖರೀದಿಗೆ 75 ಸಾವಿರ ಕೋಟಿ ರೂ. ವ್ಯಯ. 40 ಲಕ್ಷ ರೈತರಿಗೆ ಇದರ ಲಾಭ ಸಿಕ್ಕಿದೆ. 1.ಲಕ್ಷ 72 ಸಾವಿರ ಕೋಟಿ ರೂ. ಮೊತ್ತದಲ್ಲಿ ಭತ್ತ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು. ಪಶುಪಾಲನೆ, ಹೈನುಗಾರಿಕೆ ಕುಕ್ಕುಟೋದ್ಯಮಕ್ಕೆ ಅನುದಾನ ಹೆಚ್ಚಳ ಮಾಡಲಾಗುವುದು 30 ಸಾವಿರ ಕೋಟಿ ರೂ. ಇದ್ದ ಅನುದಾನ 40 ಸಾವಿರ ಕೋಟಿಗೆ ಹೆಚ್ಚಳ ರೈತರ ಸಾಲ ಯೋಜನೆಗೆ 16.5 ಲಕ್ಷ ಕೋಟಿ ರೂ.ನಿಗದಿ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ರೈತರ ನೆಮ್ಮದಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗುವಂತೆ ಮಾಡುತ್ತೇವೆ.

ಸರಕಾರ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವುದು ನಿಲ್ಲಿಸೋಲ್ಲ: ವಿತ್ತ ಸಚಿವೆ ಭರವಸೆ

ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಲು ಸಿದ್ಧ ಗೋಧಿ ಹಾಗೂ ಅಕ್ಕಿಗೆ ಅಗತ್ಯ ಬೆಂಬಲ ಬೆಲೆ

ಕೃಷಿ ಸಾಲದ ಗುರಿ 16.5 ಲಕ್ಷ ಕೋಟಿಗೆ ಹೆಚ್ಚಳ