Union Budget 2022 : ಹಳ್ಳಿ ಶಾಲೆ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಪ್ರಧಾನಿ ಇ-ವಿದ್ಯಾ ಯೋಜನೆ ಅಡಿಯಲ್ಲಿ 200 ಟಿವಿ ಚಾನೆಲ್ ಗಳ ಸ್ಥಾಪನೆ – Vishwanews24
Union Budget 2022: ಹಳ್ಳಿ ಶಾಲೆ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಪ್ರಧಾನಿ ಇ-ವಿದ್ಯಾ ಯೋಜನೆ ಅಡಿಯಲ್ಲಿ 200 ಟಿವಿ ಚಾನೆಲ್ ಗಳ ಸ್ಥಾಪನೆ , ಒನ್ ಕ್ಲಾಸ್, ಒನ್ ಟಿವಿ ಚಾನಲ್ ಸಾಮರ್ಥ್ಯ ಹೆಚ್ಚಳ – Vishwanews24
ನವದೆಹಲಿ: ಹಳ್ಳಿಗಳ ಶಾಲೆಗಳ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಪ್ರಧಾನಿ ಇ-ವಿದ್ಯಾ ಯೋಜನೆ ಅಡಿಯಲ್ಲಿ 200 ಟಿವಿ ಚಾನೆಲ್ ಗಳ ಸ್ಥಾಫನೆ ಮಾಡಲಾಗುವುದು ಎಂದರು.
ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುತ್ತದೆ. ವಿಶ್ವ ದರ್ಜೆಯ ಶಿಕ್ಷಣಕ್ಕೆ ಮಾನ್ಯತೆ ಒದಗಿಸಿಕೊಡಲಾಗುತ್ತದೆ. ಇದುವರೆಗೆ ಕಡಿಮೆ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿದ್ದಂತ ಒನ್ ಕ್ಲಾಸ್, ಒನ್ ಟಿವಿ ಚಾನಲ್ ಸಾಮರ್ಥ್ಯವನ್ನು ಹೆಚ್ಚಳ ಮಾಡಲಾಗಿದೆ.
ಈ ಚಾನಲ್ ಗಳನ್ನು 200ಕ್ಕೆ ಹೆಚ್ಚಿಸುತ್ತಿರೋದಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.
ಇದನ್ನೂ ಓದಿ :
ಈ ಬಗ್ಗೆ ಇಂದು ಸಂಸತ್ ನಲ್ಲಿ ಕೇಂದ್ರ ಬಜೆಟ್ ಮಂಡಿಸುತ್ತಾ ಮಾತನಾಡಿದಂತ ಅವರು, ಹಳ್ಳಿ ಶಾಲೆಗಳ ಮಕ್ಕಳ ವಿದ್ಯಾಭ್ಯಾಸದ ದೃಷ್ಠಿಯಿಂದ ಒನ್ ಕ್ಲಾಸ್, ಒನ್ ಟಿವಿ ಚಾನಲ್ ಆರಂಭಿಸಲಾಗಿದೆ. ಕೊರೋನಾ ಕಾರಣ ಮಕ್ಕಳು ಮನೆಯಲ್ಲಿಯೇ ಉಳಿದಿದ್ದಾರೆ. ಈ ಮಕ್ಕಳ ವಿದ್ಯಾಭ್ಯಾಸದ ದೃಷ್ಠಿಯಿಂದ ಚಾನಲ್ ಗಳ ಸಂಖ್ಯೆನ್ನು ಪ್ರಧಾನ ಮಂತ್ರಿ ಇ-ವಿದ್ಯಾ ಯೋಜನೆ ಅಡಿಯಲ್ಲಿ 200ಕ್ಕೆ ಹೆಚ್ಚಳ ಮಾಡಲಾಗುತ್ತಿದೆ ಎಂದರು.
ಪ್ರಧಾನ ಮಂತ್ರಿ ಇ-ವಿದ್ಯಾ ಯೋಜನೆಯ ಅಡಿಯಲ್ಲಿ ಒನ್ ಕ್ಲಾಸ್, ಒನ್ ಟಿವಿ ಚಾನಲ್ ಗಳ ಸಂಖ್ಯೆಯನ್ನು 200ಕ್ಕೆ ಹೆಚ್ಚಳ ಮಾಡುತ್ತಿರುವ ಕಾರಣ, ದೇಶದ 1 ರಿಂದ 12ನೇ ತರಗತಿ ಮಕ್ಕಳಿಗೆ ಟಿವಿ ಚಾನಲ್ ಗಳ ಮೂಲಕ ವಿದ್ಯಾಬ್ಯಾಸದ ಕಲಿಕೆಗೆ ಅನುಕೂಲವಾಗಲಿದೆ ಎಂದರು.
ಇದನ್ನೂ ಓದಿ :
