Featured

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ ; ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ – vishwanews24

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ ..

ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ

ವಾಷಿಂಗ್ಟನ್: ಅಮೆರಿಕದ ಮ್ಯಾಸಚುಸೆಟ್ಸ್‌ನಲ್ಲಿ ಭಾರತೀಯ ಮೂಲದ ಯುವಕನೊಬ್ಬ ತನ್ನ ತಾಯಿ ಹಾಗೂ 14 ವರ್ಷದ ತಮ್ಮನನ್ನು ಹತ್ಯೆಗೈದಿರುವ ಆರೋಪ ಕೇಳಿಬಂದಿದೆ. ಪ್ರಕರಣದ ತನಿಖೆ ವೇಳೆ ಆರೋಪಿ ಹತ್ಯೆಗೆ ಮುನ್ನ ಇಂಟರ್ನೆಟ್ ಹಾಗೂ ChatGPT ಸೇರಿದಂತೆ AI ತಂತ್ರಜ್ಞಾನ ಬಳಸಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ ಎಂದು ವರದಿಯಾಗಿದೆ.

ಆಗಸ್ಟ್ 11ರಂದು ಬೋಸ್ಟನ್‌ನಿಂದ ಸುಮಾರು 48 ಕಿ.ಮೀ ದೂರದಲ್ಲಿರುವ ಆಕ್ಟನ್‌ನ ಮಾರ್ತಾ ಲೇನ್‌ನಲ್ಲಿರುವ ಮನೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಆಕ್ಟನ್ ನಿವಾಸಿ ಅರ್ಜುನ್ ಅರವಿಂದ್ ಆರೋಪಿ ಎಂದು ಗುರುತಿಸಲಾಗಿದ್ದು, ಆತನ ತಾಯಿ ಸುಧಾ ವೆಂಕಟೇಶನ್ (45) ಹಾಗೂ ತಮ್ಮ ಸಿದ್ಧಾರ್ಥ್ ಅರವಿಂದ್ (14) ಮೃತಪಟ್ಟಿದ್ದಾರೆ.

ಪೊಲೀಸರ ಪ್ರಕಾರ, ಆಕ್ಟನ್‌ನ ಶಾಲೆಯೊಂದರಲ್ಲಿ ವಿದ್ಯಾರ್ಥಿಯಾಗಿದ್ದ ಅರ್ಜುನ್ ತನ್ನ ತಾಯಿ ಮತ್ತು ತಮ್ಮನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಬಳಿಕ ತಾಯಿಯ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆ ನಡೆದ ದಿನ ಸಂಜೆ ಸುಮಾರು 6.30ಕ್ಕೆ ಟ್ಯೂಷನ್ ಶಿಕ್ಷಕರೊಬ್ಬರು ಮನೆಗೆ ಬಂದಾಗ ಬಾಗಿಲು ತೆರೆಯಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಅರ್ಜುನ್‌ನ ತಂದೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕುಟುಂಬಸ್ಥರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ದೊರೆಯದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.

ಸ್ಥಳಕ್ಕೆ ಆಗಮಿಸಿದ ಆಕ್ಟನ್ ಪೊಲೀಸರು ಮನೆಯ ನೆಲಮಾಳಿಗೆಯಲ್ಲಿ ಸುಧಾ ವೆಂಕಟೇಶನ್ ಅವರ ಮೃತದೇಹ ಹಾಗೂ ಮೊದಲ ಮಹಡಿಯಲ್ಲಿ ಸಿದ್ಧಾರ್ಥ್ ಅವರ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಇಬ್ಬರ ಮೃತದೇಹಗಳ ಮೇಲೂ ಗಾಯದ ಗುರುತುಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಳಿಕ ನಾಪತ್ತೆಯಾಗಿದ್ದ ಅರ್ಜುನ್ ಹಾಗೂ ಆತ ಬಳಸಿಕೊಂಡು ಪರಾರಿಯಾಗಿದ್ದ ಕಾರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಬಳಿಕ ವೇಲ್ಯಾಂಡ್‌ನ ಪಾರ್ಕಿಂಗ್ ಲಾಟ್‌ನಲ್ಲಿ ಕಾರು ಪತ್ತೆಯಾಗಿದ್ದು, ಅದರೊಳಗಿದ್ದ ಅರ್ಜುನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹತ್ಯೆಗೆ AI ಬಳಕೆ ಆರೋಪ
ಪ್ರಕರಣದ ತನಿಖೆಯ ವೇಳೆ ಅರ್ಜುನ್ ತನ್ನ ಕುಟುಂಬ ಸದಸ್ಯರ ಹತ್ಯೆಗೆ ಮುನ್ನ ಇಂಟರ್ನೆಟ್ ಹಾಗೂ ChatGPT ಬಳಸಿದ್ದಾನೆ ಎಂಬ ಮಾಹಿತಿ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ ಎಂದು ವರದಿಯಾಗಿದೆ.

ಆರೋಪಿಯ ವಿರುದ್ಧ ಎರಡು ಕೊಲೆ ಆರೋಪಗಳು ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಾಗಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

16 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

18 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

18 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

18 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

19 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

19 hours ago