ಅಯೋಧ್ಯೆಯಲ್ಲಿ ರಾಮಮಂದಿರ ಕಾಮಗಾರಿ ವೀಕ್ಷಿಸಿದ ಪೇಜಾವರಶ್ರೀ–
ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮನಗರಿಗೆ ಭೇಟಿ ನೀಡಿ ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.ರಾಮಲಲ್ಲಾನ ತಾತ್ಕಾಲಿಕ ಗುಡಿಗೆ ತೆರಳಿದ ಪೇಜಾವರ ಶ್ರೀಗಳು ದರ್ಶನ ಪಡೆದರು. ದೇವರಿಗೆ ಪುಷ್ಪಾರ್ಚನೆ ಮತ್ತು ಚಾಮರ ಸೇವೆ ಮಾಡಿದರು. ಕೆಲಕಾಲ ಗುಡಿ ಮುಂದೆ ಕುಳಿತು ಜಪಗೈದರು. ಬಳಿಕ ಅಲ್ಲಿಂದ ಮಂದಿರ ನಿರ್ಮಾಣ ಮಾಡುವ ಬುನಾದಿ ತುಂಬಿಸುವ ಸ್ಥಳಕ್ಕೆ ತೆರಳಿದರುಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಅಡಿಪಾಯ ತುಂಬಿಸುವ ಕಾಮಗಾರಿ ಆರಂಭವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಅಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ, ಈವರೆಗೆ ನಡೆದ ಕಾಮಗಾರಿಯ ಪ್ರಗತಿಯನ್ನು ಎಂಜಿನಿಯರ್ ಗಳು ಸ್ವಾಮೀಜಿಗೆ ವಿವರಿಸಿದರು. ತಳಹದಿ ಕಾಮಗಾರಿ, ಅದರ ಸಾಮರ್ಥ್ಯದ ಬಗ್ಗೆ ವಿವರಣೆ ನೀಡಿದರು.ಈ ವೇಳೆ ಟ್ರಸ್ಟ್ ನ ವಿಶ್ವಸ್ಥ ಡಾ. ಅನಿಲ್ ಮಿಶ್ರಾ, ಮಂದಿರ ನಿರ್ಮಾಣ ಉಸ್ತುವಾರಿ ತಂಡದ ಗೋಪಾಲ ನಾಗರಕಟ್ಟೆ, ಮಂದಿರ ನಿರ್ಮಾಣ ಸಂಸ್ಥೆ ಎಲ್‍ಆಯಂಡ್‍ಟಿ ಮತ್ತು ಮೇಲುಸ್ತುವಾರಿ ಸಂಸ್ಥೆ ಟಾಟಾ ಕನ್ಸಲ್ಟನ್ಸಿಯ ಎಂಜಿನಿಯರ್ ಗಳಿಂದಲೂ ಮಾಹಿತಿ ಪಡೆದರು. ಪೇಜಾವರ ಮಠದ ಆಪ್ತ ಕಾರ್ಯದರ್ಶಿ ವಿಷ್ಣು ಮತ್ತು ಕೃಷ್ಣ ಜೊತೆಗಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…