ಬೆಂಗಳೂರು: ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ (WhatsApp), ಫೇಸ್‍ಬುಕ್ (Facebook) ಮತ್ತು ಇನ್‍ಸ್ಟಾಗ್ರಾಂ (Instagram) ಜಗತ್ತಿನಾದ್ಯಂತ ರಾತ್ರಿ 9 ಗಂಟೆಯಿಂದ ಸ್ಥಗಿತಗೊಂಡಿದ್ದವು. ಮಧ್ಯರಾತ್ರಿ 3.30ರ ವೇಳೆಗೆ ವಾಟ್ಸಪ್, ಫೇಸ್‍ಬುಕ್, ಇನ್‍ಸ್ಟಾಗ್ರಾಂ ಮತ್ತೆ ಸಹಜ ಸ್ಥಿತಿಗೆ ಮರಳಿದೆ.
ಜಗತ್ತಿನಲ್ಲಿ 200 ಕೋಟಿ ಫೇಸ್‍ಬುಕ್ ಬಳಕೆದಾರರಿದ್ದಾರೆ. ಭಾರತದಲ್ಲಿ 53 ಕೋಟಿ ವಾಟ್ಸಪ್ ಬಳಕೆದಾರರು, 41 ಕೋಟಿ ಫೇಸ್‍ಬುಕ್ ಬಳಕೆದಾರರು ಮತ್ತು 21 ಕೋಟಿ ಇನ್‍ಸ್ಟಾಗ್ರಾಂ ಬಳಕೆದಾರರು ಇದ್ದಾರೆ. ವಾಟ್ಸಪ್ ಮತ್ತು ಇನ್‍ಸ್ಟಾಗ್ರಾಂ ಕೂಡಾ ಫೇಸ್‍ಬುಕ್‍ನ ಸಹವರ್ತಿ ಕಂಪನಿಗಳಾಗಿವೆ. ಸ್ಥಗಿತ ಗೊಂಡಿರುವುದಕ್ಕೆ ಬಳಕೆದಾರರಲ್ಲಿ ವಾಟ್ಸಾಪ್, ಎಫ್‍ಬಿ ಕ್ಷಮೆಯಾಚಿಸಿದೆ.
2014ರಲ್ಲಿ ವಾಟ್ಸಪ್‍ನ್ನು ಫೇಸ್‍ಬುಕ್ ಖರೀದಿಸಿತ್ತು. ಫೇಸ್‍ಬುಕ್ ಸೇವೆ ಸ್ಥಗಿತಗೊಂಡಿದ್ದರಿಂದ ಫೇಸ್‍ಬುಕ್‍ನ ಷೇರು ಮೌಲ್ಯ ಕೆಲವೇ ಗಂಟೆಗಳಲ್ಲಿ ಶೇಕಡಾ 4.9ರಷ್ಟು ಕುಸಿದಿದೆ. ಪರಿಣಾಮ ಮಾಲೀಕ ಮಾರ್ಕ್ ಝುಕರ್‍ಬರ್ಗ್‍ಗೆ ಕೆಲವೇ ಗಂಟೆಗಳಲ್ಲಿ 44,743 ಕೋಟಿ ರೂಪಾಯಿ ನಷ್ಟ ಆಗಿದೆ. ಸೆಪ್ಟೆಂಬರ್ 15ರಂದು ಫೇಸ್‍ಬುಕ್‍ನ ಷೇರು ಮೌಲ್ಯ ಶೇಕಡಾ 15ರಷ್ಟು ಕುಸಿತದ ಬಳಿಕ ನಿನ್ನೆ ಅತೀ ದೊಡ್ಡ ಕುಸಿತ ಆಗಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…