Featured

WhatsApp, Facebook, Instagram ಬಂದ್ : 9 ಗಂಟೆಯಲ್ಲಿ ಜುಕರ್‌ಬರ್ಗ್‌ಗೆ 44 ಸಾವಿರ ಕೋಟಿ ನಷ್ಟ -Vishwanews24

WhatsApp, Facebook, Instagram ಬಂದ್ : 9 ಗಂಟೆಯಲ್ಲಿ ಜುಕರ್‌ಬರ್ಗ್‌ಗೆ 44 ಸಾವಿರ ಕೋಟಿ ನಷ್ಟ -Vishwanews24

ಬೆಂಗಳೂರು: ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ (WhatsApp), ಫೇಸ್‍ಬುಕ್ (Facebook) ಮತ್ತು ಇನ್‍ಸ್ಟಾಗ್ರಾಂ (Instagram) ಜಗತ್ತಿನಾದ್ಯಂತ ರಾತ್ರಿ 9 ಗಂಟೆಯಿಂದ ಸ್ಥಗಿತಗೊಂಡಿದ್ದವು. ಮಧ್ಯರಾತ್ರಿ 3.30ರ ವೇಳೆಗೆ ವಾಟ್ಸಪ್, ಫೇಸ್‍ಬುಕ್, ಇನ್‍ಸ್ಟಾಗ್ರಾಂ ಮತ್ತೆ ಸಹಜ ಸ್ಥಿತಿಗೆ ಮರಳಿದೆ.

ಜಗತ್ತಿನಲ್ಲಿ 200 ಕೋಟಿ ಫೇಸ್‍ಬುಕ್ ಬಳಕೆದಾರರಿದ್ದಾರೆ. ಭಾರತದಲ್ಲಿ 53 ಕೋಟಿ ವಾಟ್ಸಪ್ ಬಳಕೆದಾರರು, 41 ಕೋಟಿ ಫೇಸ್‍ಬುಕ್ ಬಳಕೆದಾರರು ಮತ್ತು 21 ಕೋಟಿ ಇನ್‍ಸ್ಟಾಗ್ರಾಂ ಬಳಕೆದಾರರು ಇದ್ದಾರೆ. ವಾಟ್ಸಪ್ ಮತ್ತು ಇನ್‍ಸ್ಟಾಗ್ರಾಂ ಕೂಡಾ ಫೇಸ್‍ಬುಕ್‍ನ ಸಹವರ್ತಿ ಕಂಪನಿಗಳಾಗಿವೆ. ಸ್ಥಗಿತ ಗೊಂಡಿರುವುದಕ್ಕೆ ಬಳಕೆದಾರರಲ್ಲಿ ವಾಟ್ಸಾಪ್, ಎಫ್‍ಬಿ ಕ್ಷಮೆಯಾಚಿಸಿದೆ.

2014ರಲ್ಲಿ ವಾಟ್ಸಪ್‍ನ್ನು ಫೇಸ್‍ಬುಕ್ ಖರೀದಿಸಿತ್ತು. ಫೇಸ್‍ಬುಕ್ ಸೇವೆ ಸ್ಥಗಿತಗೊಂಡಿದ್ದರಿಂದ ಫೇಸ್‍ಬುಕ್‍ನ ಷೇರು ಮೌಲ್ಯ ಕೆಲವೇ ಗಂಟೆಗಳಲ್ಲಿ ಶೇಕಡಾ 4.9ರಷ್ಟು ಕುಸಿದಿದೆ. ಪರಿಣಾಮ ಮಾಲೀಕ ಮಾರ್ಕ್ ಝುಕರ್‍ಬರ್ಗ್‍ಗೆ ಕೆಲವೇ ಗಂಟೆಗಳಲ್ಲಿ 44,743 ಕೋಟಿ ರೂಪಾಯಿ ನಷ್ಟ ಆಗಿದೆ. ಸೆಪ್ಟೆಂಬರ್ 15ರಂದು ಫೇಸ್‍ಬುಕ್‍ನ ಷೇರು ಮೌಲ್ಯ ಶೇಕಡಾ 15ರಷ್ಟು ಕುಸಿತದ ಬಳಿಕ ನಿನ್ನೆ ಅತೀ ದೊಡ್ಡ ಕುಸಿತ ಆಗಿದೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

7 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

7 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

8 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

9 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

12 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

12 hours ago