ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದ ಪಾಕ್: ಉಗ್ರ ಸಂಘಟನೆ ಜೈಷ್-ಎ-ಮೊಹ್ಮದ್ ವಶಕ್ಕೆ ಪಡೆದ ಪಾಕ್ ಸರ್ಕಾರ..- Vishwanews24
ವಿಶ್ವಸಂಸ್ಥೆಯ ಭದ್ರತಾ ಸಮಿತಿ ಸೇರಿದಂತೆ ಅನೇಕ ದೇಶ ಆಕ್ರೋಶ ವ್ಯಕ್ತಪಡಿಸಿವೆ. ಇದೀಗ ಎಚ್ಚೆತುಕೊಂಡಿರುವ ಪಾಕ್ ಸರ್ಕಾರ ಜೈಷ್-ಎ-ಮೊಹ್ಮದ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನ ತನ್ನ ವಶಕ್ಕೆ ಪಡೆದುಕೊಂಡಿದೆ.
ಪಂಜಾಬ್ ಪ್ರಾಂತ್ಯದ ಬಹಾವಲ್ಪುರ್ ಪ್ರದೇಶದಲ್ಲಿರುವ ಕಚೇರಿಯನ್ನ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಅದರ ಮೇಲೆ ಸಂಪೂರ್ಣ ನಿಯಂತ್ರಣ ಹೇರಲಾಗಿದ್ದು, ಅವುಗಳ ನಿರ್ವಹಣೆಗಾಗಿ ಅಧಿಕಾರಿಗಳ ನೇಮಕ ಮಾಡಲಾಗಿದೆ.
ಈಗಾಗಲೇ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದವಾ ಹಾಗೂ ಫಲ್ಹಾ-ಇ-ಇನ್ಸಯಾತ್ ಸಂಘಟನೆಗಳನ್ನ ನಿಷೇಧ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಭದ್ರತಾ ಸಮಿತಿ ಸಭೆಯಲ್ಲಿ ಜೆಇಎಂ ಪ್ರಧಾನ ಕಚೇರಿ ವಶಕ್ಕೆ ಪಡೆಯುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

