ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡದ ಹಿರಿಯ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ -Vishwanews24

Featured, ರಾಷ್ಟ್ರ ನ್ಯೂಸ್

ಮುಂಬಯಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಹಿರಿಯ ಅನುಭವಿ ಆಟಗಾರ್ತಿ ಮಿಥಾಲಿ ರಾಜ್, ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿಯನ್ನು ಸಲ್ಲಿಸಿದ್ದಾರೆ.

ಭಾರತೀಯ ಮಹಿಳಾ ಟ್ವೆಂಟಿ-20 ಕ್ರಿಕೆಟ್ ತಂಡದ ಮಾಜಿ ನಾಯಕಿಯೂ ಆಗಿರುವ ಮಿಥಾಲಿ 32 ಟ್ವೆಂಟಿ-20 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು.  ಹಾಗೆಯೇ 2012ರ ಶ್ರೀಲಂಕಾ, 2014ರ ಬಾಂಗ್ಲಾದೇಶ ಹಾಗೂ 2016ರಲ್ಲಿ ಭಾರತದಲ್ಲಿ ನಡೆದ ವಿಶ್ವ ಟ್ವೆಂಟಿ-20 ಮಹಿಳಾ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ಇದು ಭಾರತೀಯ ಬ್ಯಾಟ್ಸ್‌ವುವೆನ್‌ರಿಂದ ದಾಖಲಾದ ಗರಿಷ್ಠ ಮೊತ್ತವಾಗಿದೆ.  ಅಷ್ಟೇ ಯಾಕೆ ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 2000 ರನ್ ಗಳಿಸಿದ ಭಾರತದ ಮೊದಲ ಆಟಗಾರ್ತಿ ಎಂಬ ಹಿರಿಮೆಗೂ ಪಾತ್ರವಾಗಿದ್ದರು.

ಒಟ್ಟು 88 ಟಿ20 ಪಂದ್ಯಗಳನ್ನಾಡಿರುವ ಮಿಥಾಲಿ ರಾಜ್ 2364 ರನ್ ಗಳಿಸಿದ್ದಾರೆ. ಇದು ಭಾರತೀಯ ಮಹಿಳಾ ಆಟಗಾರ್ತಿ ದಾಖಲಿಸಿದ ಗರಿಷ್ಠ ಮೊತ್ತವಾಗಿದೆ.