ಅಂಬೇಡ್ಕರ್ ಅವರ ಆದರ್ಶವನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸೋಣ : ಯಶ್ ಪಾಲ್ ಸುವರ್ಣ – Vishwanews24
ಅಂಬೇಡ್ಕರ್ ಅವರ ಆದರ್ಶವನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸೋಣ : ಯಶ್ ಪಾಲ್ ಸುವರ್ಣ – Vishwanews24
ಡಾ. ಬಿ ಆರ್ ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ಉದ್ಯಾವರ ಮಹಾಶಕ್ತಿ ಕೇಂದ್ರದ ವತಿಯಿಂದ ಉದ್ಯಾವರ ಸೌಂದರ್ಯ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯಪ್ರಧಾನ ಕಾರ್ಯದರ್ಶಿ ಶ್ರೀ ಯಶಪಾಲ್ ಸುವರ್ಣ ಮಾತನಾಡಿ ಅಂಬೇಡ್ಕರ್ ಅವರ ಆದರ್ಶವನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಭಾರತದ ಸಂವಿಧಾನವನ್ನು ಗೌರವಿಸುವ ಮೂಲಕ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉದ್ಯಾವರ ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಶ್ರೀಯನ್, ಉದ್ಯಾವರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರವಿ ಪಡುಕರೆ,ಕಾಪು ಬಿಜೆಪಿ ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್,ಯುವ ಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ,ಜಿಲ್ಲಾ ಪ್ರಕೋಷ್ಟಗಳ ಸಂಯೋಜಕರು ವಿಜಯ್ ಕುಮಾರ ಉದ್ಯಾವರ. ಬಿಜೆಪಿ ಮುಖಂಡರಾದ ಗಣೇಶ್ ಕುಮಾರ್,ಸಂತೋಷ್ ಕುಮಾರ್, ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರುಗಳು,ಬೂತ್ ಅಧ್ಯಕ್ಷರುಗಳು,ಹಾಗು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
