ಅಕ್ರಮ ಬಾಂಗ್ಲಾ ಪ್ರಜೆಗಳು 7 ಮಂದಿಯೂ ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಲ್ಲ: ಎಸ್‌.ಪಿ.ಅರುಣ್‌ – vishwanews24

Featured, ಉಡುಪಿ

ಅಕ್ರಮ ಬಾಂಗ್ಲಾ ಪ್ರಜೆಗಳು 7 ಮಂದಿಯೂ ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಲ್ಲ: ಎಸ್‌.ಪಿ.ಅರುಣ್‌

ಉಡುಪಿ: ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ 7 ಮಂದಿಯೂ ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಕೊಂಡಿಲ್ಲ ಎನ್ನುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಲ್ಲ ಎಂದು ಕಾರ್ಮಿಕ ಇಲಾಖೆ ದೃಢಪಡಿಸಿದೆ.

ಉಡುಪಿ: ಈಶ್ವರ್‌ ಮಲ್ಪೆ ಅವರ ಮಕ್ಕಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲು ಮುಂದಾದ ಕೇರಳದ ಸಂಘ, ಸಂಸ್ಥೆಗಳು – vishwanews24

ಪ್ರಕರಣಕ್ಕೆ ಸಂಬಂಧಿಸಿ ಮನೆಯ ಮಾಲಕರು, ಕಟ್ಟಡ ಮಾಲಕರು ಸೇರಿದಂತೆ ಆರೋಪಿಗಳ ಸಂಪರ್ಕದಲ್ಲಿದ್ದವರ ಹೆಚ್ಚಿನ ವಿಚಾರಣೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ| ಕೆ. ಅರುಣ್‌ ತಿಳಿಸಿದ್ದಾರೆ.

Leave a Reply