ಅಕ್ರಮ ಹಣ ವಹಿವಾಟು ಆರೋಪ: ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ ಜಾರಿ ನಿರ್ದೇಶನಾಲಯ
ಹೊಸದಿಲ್ಲಿ, : ತೆರಿಗೆ ವಂಚನೆ ಮತ್ತು ಹವಾಲಾ ವಹಿವಾಟಿನ ಆರೋಪದಲ್ಲಿ ಜಾರಿ ನಿರ್ದೇಶನಾಲಯವು ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಹಣ ವಹಿವಾಟು (ಹಣಚಲುವೆ) ಪ್ರಕರಣ ದಾಖಲಿಸಿದೆ.
ಡಿ.ಕೆ.ಶಿವಕುಮಾರ್, ಹೊಸದಿಲ್ಲಿಯ ಕರ್ನಾಟಕ ಭವನದ ಉದ್ಯೋಗಿ ಹನುಮಂತಯ್ಯ ಸೇರಿ ಹಲವರ ವಿರುದ್ಧ ಜಾರಿ ನಿರ್ದೇಶನಾಲಯವು ಪಿಎಂಎಲ್ ಎ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.
ಆದಾಯ ತೆರಿಗೆ ಇಲಾಖೆಯು ಸಲ್ಲಿಸಿದ್ದ ಚಾರ್ಜ್ ಶೀಟ್ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಾಹಿರಾತು

