ಅತ್ಯಾಚಾರ ಪ್ರಕರಣ : ಕಿರುತೆರೆ ನಟ ಮಡೇನೂರು ಮನು ಗೆ 14 ದಿನ ನ್ಯಾಯಾಂಗ ಬಂಧನ – vishwanews24

Featured, ರಾಜ್ಯ ನ್ಯೂಸ್

ಅತ್ಯಾಚಾರ ಪ್ರಕರಣ : ಕಿರುತೆರೆ ನಟ ಮಡೇನೂರು ಮನು ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ತನ್ನ ಸಹ ಕಲಾವಿದಯ ಮೇಲೆ ಅತ್ಯಾಚಾರ ಎಸೆಗಿರುವ ಆರೋಪದ ಮೇಲೆ ಇದೀಗ ಕಿರುತೆರೆ ನಟ ಮಡೇನೂರು ಮನು ವಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 3ನೇ ACMM ಕೋರ್ಟ್‌ ಆದೇಶ ಹೊರಡಿಸಿದೆ.

5 ದಿನಗಳ ಪೊಲಿಸ್‌ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲತ್ತಹಳ್ಳಿಯಲ್ಲಿ ಮನುಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು. ಮೆಡಿಕಲ್‌ ಟೆಸ್ಟ್‌ ನಡೆದ ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರು ಮನು ಪರ ವಕೀಲರಿಗೆ ಕೆಲ ಪ್ರಶ್ನೆ ಕೇಳಿದರು.

ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ – vishwanews24

ಈ ಪ್ರಶ್ನೆಗೆ, ನನ್ನ ಕಕ್ಷಿದಾರರು ರಿಯಾಲಿಟಿ ಶೋನಲ್ಲಿ ಅಭಿನಯಿಸಿದ್ದಾರೆ. ಮದುವೆಯಾಗಿದೆ, ಆದರೆ ದೂರುದಾರೆ ಬೇರೆಯವರು ಎಂದು ಉತ್ತರ ನೀಡಿದರು. ದೂರುದಾರೆಗೆ ಮದುವೆ ಆಗಿದ್ಯಾ ಎಂದು ಕೇಳಿದ್ದಕ್ಕೆ ಸಂತ್ರಸ್ತೆಯ ಪರ ವಕೀಲೆ ಮೊಬೈಲ್‌ನಲ್ಲಿರುವ ಕೆಲ ವಿಡಿಯೋವನ್ನು ನ್ಯಾಯಾಲಯಕ್ಕೆ ನೀಡಿದರು. ಅಂತಿಮವಾಗಿ ಕೋರ್ಟ್‌ 14 ದಿನಗಳ ಕಾಲ ಮನುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

Leave a Reply