ಅಧಿಕಾರದ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು: ಈಶ್ವರ್ ಖಂಡ್ರೆ – vishwanews24

Featured, ರಾಜ್ಯ ನ್ಯೂಸ್

ಅಧಿಕಾರದ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು: ಈಶ್ವರ್ ಖಂಡ್ರೆ

ಬೀದರ್: ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ  ಹೇಳಿದರು.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಕಾಂಗ್ರೆಸ್  ಶಾಸಕರಿಗೆ ಬಿಜೆಪಿ 100 ಕೋಟಿ ರೂ. ಆಫರ್ ವಿಚಾರವಾಗಿ ಮಾತನಾಡಿದ ಅವರು, ಅಧಿಕಾರದ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಬಿಜೆಪಿಯವರು. ಯಾವ ಮಟ್ಟಕ್ಕೂ ಇಳಿಯಲು ತಯಾರಾಗಿರುತ್ತಾರೆ. ಈ ರಾಜ್ಯದ ಜನರಿಗೆ ಬಿಜೆಪಿ ನಾಯಕರು ಉತ್ತರ ನೀಡಲಿ. 15 ಜನ ಶಾಸಕರನ್ನು ಖರೀದಿ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಸಿಎಂ ಆಗಲು 2500 ಕೋಟಿ ರೂ. ಕೊಡಬೇಕು ಎಂದು ಸ್ವತಃ ಯತ್ನಾಳ್ ಹೇಳಿದ್ದರು. ಇನ್ನೂ ಸಚಿವರಾಗಲು 500 ಕೋಟಿ ಕೊಡಬೇಕು ಎಂದು ಹೇಳಿದ್ದರು. ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ. ಯತ್ನಾಳ್‌ಗೆ ಏನಾದರೂ ಇಲ್ಲಿಯವರೆಗೆ ನೋಟಿಸ್ ಬಂದಿದೆಯಾ? ಎಂದು ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ.

ಆಪ್‌ಗೆ ರಾಜೀನಾಮೆ ನೀಡಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿ ಸೇರ್ಪಡೆ – vishwanews24

Leave a Reply