ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ – vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು : ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಮತ್ತು ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್, ಬಡಾವಣೆ ತೆರವುಗೊಳಿಸುವಂತೆ ಅರಣ್ಯ ಸಚಿವರ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.

ಪಶ್ಚಿಮ ಘಟ್ಟದ ಎಲ್ಲ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ ಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಬೇಕು. ಒಂದು ತಿಂಗಳ ಒಳಗಡೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕು ಎಂದು ಹೇಳಿದರು.

Leave a Reply