ಅನರ್ಹ ಶಾಸಕರು ಉಪಚುನಾವಣೆಗೆ ಸ್ಪರ್ಧಿಸಬಹುದು : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು -Vishwanews24
ನವದೆಹಲಿ: 17 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿತು.
17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಮುಗಿಯುವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ.
