ಅನ್ನಭಾಗ್ಯದ 5 ಕೆಜಿ ಅಕ್ಕಿಯ ಹಣ ನೀಡುವುದು ಮುಂದುವರಿಕೆ : ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ – vishwanews24
ಅನ್ನಭಾಗ್ಯದ 5 ಕೆಜಿ ಅಕ್ಕಿಯ ಹಣ ನೀಡುವುದು ಮುಂದುವರಿಕೆ : ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಮಹದಾಯಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.
ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು
- ರಾಜ್ಯದ ಒಳಾಡಳಿತ ಇಲಾಖೆ 59 ಜನ ಕೈದಿಗಳ ಸನ್ನಡತೆ ಆಧಾರದ ಮೇಲೆ ಅವಧಿ ಮುನ್ನ ಬಿಡುಗಡೆಗೆ ನಿರ್ಧಾರ.
- ವಸತಿ ಇಲಾಖೆಯಲ್ಲಿ ಬೆಟ್ಟಗೇರಿಯಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ.
- ಕಾರ್ಮಿಕ ಇಲಾಖೆಯ ಬಳಕೆದಾರರಿಂದ ಸಂಗ್ರಹಿಸುವ, ಕಾನೂನು ಇಲಾಖೆ ಅಡಿ ಬರುವ ಎಂಟು ಕಾಯ್ಡೆ ಅಡಿ, ಬಳಕೆದಾರರಿಂದ ಸಂಗ್ರಹಿಸುವ ದಂಡವನ್ನ 30% ಹೆಚ್ಚಳಕ್ಕೆ ನಿರ್ಧಾರ.
- ಕಾನೂನು ಸೇವಾ ತಿದ್ದುಪಡಿ ಕರಡು ನಿಯಮಗಳಿಗೆ 15 ದಿನ ಅವಕಾಶ ನೀಡುವುದು, ಆಕ್ಷೇಪಣೆ ಬಾರದಿದ್ರೆ ಸದರಿ ಕರಡು ನಿಯಮ ಮಂಡಿಸದೆ ನಿರ್ಣಯ ತೆಗೆದುಕೊಳ್ಳಲು ಅನುಮೋದನೆ.
- ವೈದ್ಯಕೀಯ ಶಿಕ್ಷಣ ಇಲಾಖೆ, ಕಿಮ್ಸ್ ಆಸ್ಪತ್ರೆಗೆ ಸಲಕರಣೆ ಖರೀದಿಗೆ 75 ಕೋಟಿ ಅನುದಾನ ನೀಡಲು ಅನುಮೋದನೆ.
- ಮೈಸೂರಿನ ನೆಫ್ರೋಲಜಿ ನೂರು ಬೆಡ್ ಸಾಮರ್ಥ್ಯ ಹೆಚ್ಚಳಕ್ಕೆ ಅನುಮೋದನೆ.
- ಕಲಬುರಗಿಯ ಮಕ್ಕಳ ಆಸ್ಪತ್ರೆಯನ್ನ ಇಂದಿರಾಗಾಂಧಿ ಆಸ್ಪತ್ರೆ ಸಹಯೋಗದಲ್ಲಿ 150 ಹಾಸಿಗೆ ಆಸ್ಪತ್ರೆ ಸ್ಥಾಪನೆಗೆ 221 ಕೋಟಿ ಬಿಡುಗಡೆಗೆ ಅನುಮೋದನೆ.
ಅನ್ನಭಾಗ್ಯ ಯೋಜನೆ ಅಡಿ 5k.g ಅಕ್ಕಿಯ ಹಣವನ್ನ ನೀಡುವ ಯೋಜನೆ ಮುಂದುವರೆಸಲು ನಿರ್ಧಾರ(ವ್ಯಕ್ತಿಗೆ 170 ರೂ ಹಣವನ್ನ ನೀಡಲಿರೋ ಸರ್ಕಾರ).
- ಬೆಂಗಳೂರು ನೆಪ್ರೋ- ಯುರಾಲಜಿ ಆಸ್ಪತ್ರೆಯ ಹೊರ ರೋಗಿಗಗಳ ವಿಭಾಗಗಕ್ಕೆ ನೂತನ ಕಟ್ಟಡಕ್ಕೆ 16.15 ಕೋಟಿಗೆ ಅನುಮೋದನೆ.
- ಕಂದಾಯ ಇಲಾಖೆಯ ಸಹಾಯಕ ಉಪನೋಂದಣ ಅಧಿಕಾರಿ ವರ್ಗಾವಣೆ ಅವಧಿಯನ್ನು 30-09-24ರ ವರೆಗೂ ವಿಸ್ತರಣೆಗೆ ಅನುಮೋದನೆ.
- ಸ್ವಸಹಾಯ ಗುಂಪಿನ ಮಹಿಳೆಯರಿಗೆ ಹೊಸ ಉದ್ಯೋಗ ಅವಕಾಶ ಒಂದು ಲಕ್ಷ ಮಹಿಳೆಯರಿಗೆ 2500 ಕಾಫಿ ಕಿಯೋಸ್ಕ್ಗಳನ್ನ ಒದಗಿಸಲು ಕ್ರಮ 25 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ.
- ರಾಜ್ಯದ 32 ಸ್ಥಳಗಳಲ್ಲಿ ಸ್ವಯಂ ಚಾಲಿತ ನೂತನ ವಾಹನ ಪಿಟ್ನಸ್ ಕೇಂದ್ರಗಳ ಸ್ಥಾಪನೆಗೆ ಅನುಮೋದನೆ.
- 341 ಕೋಟಿಯಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದ ಸ್ಥಾಪನೆ.. ಯೋಜನೆಗೆ ಘಟನೋತ್ತರ ಅನುಮೋದನೆ.
- ಸ್ಕ್ರಾಪಿಂಗ್ ವಾಹನಗಳ ಮೇಲಿನ ದಂಡ ವಿನಾಯತಿ ದಿನಾಂಕ ವಿಸ್ತಾರಣೆ ಅನುಮೋದನೆ – 31-03-26ರ ವರೆಗೆ.
- ಪಿಪಿಪಿ ಮಾದರಿಯಲ್ಲಿ ಟೆಕ್ಸ್ಟೈಲ್ಸ್ ಪಾರ್ಕ್ ಮಾಡಲು ಅನುಮೋದನೆ.
- ಉಡುಪಿಯ ಕಾರ್ಕಳದಲ್ಲಿ ಪಿಪಿಪಿ ಮಾದರಿಯಲ್ಲಿ ಟೆಕ್ಸ್ಟೈಲ್ಸ್ ಪಾರ್ಕ್ ಮಾಡಲು ಅನುಮೋದನೆ.
- ಸ್ಥಳೀಯ ಉದ್ಯೋಗಿಗಳಿಗೆ ಕೌಶಲ್ಯತೆ ನೀಡಲು ನಿಪುಣ ಕರ್ನಾಟಕ ಉಪಕ್ರಮ ಹೆಸರಲ್ಲಿ 100 ಕೋಟಿ ವೆಚ್ಚದಲ್ಲಿ ಟ್ರೈನಿಂಗ್ ನೀಡಲು ಅನುಮೋದನೆ.
- ಕರ್ನಾಟಕ ಜೈವಿಕ ತಂತ್ರಜ್ಞಾನ ಅಡಿಯಲ್ಲಿ ಐದು ವರ್ಷಗಳ ಕಾಲ ನಾಲ್ಕು ಕೋಟಿ ವೆಚ್ಚದಲ್ಲಿ ಪ್ರೋತ್ಸಾಹ ದನ ನೀಡಲು ಅನುಮೋದನೆ.
- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳ ನೀಡಲು ಅನುಮೋದನೆ.
- ಆಹಾರ ಇಲಾಖೆ ಇಂದ ಪಡಿತರ ಫಲಾನುಭವಿಗಳಿಗೆ ಹಣದ ಬದಲು, ಆಹಾರ ನೀಡುವ ಚಿಂತನೆ ಇತ್ತು.. DBT ಮೂಲಕ ಹಣವನ್ನ ಮುಂದುವರೆಸಲು ನಿರ್ಧಾರ
ಚಿತ್ರ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು ..! vishwanews24
