ಅಪ್ಪು ಡ್ರೀಮ್ ಪ್ರೊಜೆಕ್ಟ್ : ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟೀಸರ್ ಬಿಡುಗಡೆ – Vishwanews24
ಅಪ್ಪು ಡ್ರೀಮ್ ಪ್ರೊಜೆಕ್ಟ್ : ‘ಗಂಧದ ಗುಡಿ’ ಟೀಸರ್ ಬಿಡುಗಡೆ – Vishwanews24
ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಹುಟ್ಟುಹಬ್ಬದಂದೆ ದಿ. ನಟ ಪುನೀತ್ ರಾಜ್‍ಕುಮಾರ್ ಅವರ ಕನಸಿನ ಗಂಧದಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ರಿಲೀಸ್ ಆಗಿದೆ.
ನ.1ರಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅದರ ಟೈಟಲ್ ಟೀಸರ್ ಲಾಂಚ್ ಮಾಡಬೇಕು ಎಂಬುದು ಅವರ ಪುನೀತ್ ಅವರ ಕನಸಾಗಿತ್ತು. ಆದರೆ ಅದಕ್ಕೂ ಮುನ್ನವೇ ಅವರು ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಇಂದು (ಡಿ.6) ಸಾಕ್ಷ್ಯಚಿತ್ರದ ಶೀರ್ಷಿಕೆ ಟೀಸರ್ ಅನಾವರಣ ಮಾಡಲಾಗಿದೆ.
ಗಂಧದ ಗುಡಿ ಚರಿತ್ರೆಯನ್ನು ಮರುಕಳಿಸುವಂತಿದೆ ಈ ಗಂಧದ ಗುಡಿ ಟೀಸರ್ ಕರ್ನಾಟಕ ಅರಣ್ಯ ಸಂಪತ್ತಿನ ಮಾಹಿತಿಯನ್ನು ಮತ್ತು ಪ್ರಕೃತಿ ಸೌಂದರ್ಯದ ಬಗ್ಗೆ ಇರುವ ವಿಶೇಷ ಕಾಳಜಿಯ ಡಾಕ್ಯುಮೆಂಟರಿ ಇದಾಗಿದೆ. ಡಾ.ರಾಜ್‍ಕುಮಾರ್ ಹಾಗೂ ಶಿವರಾಜ್ಕುಮಾರ್ ಅವರು ಕೂಡ ಗಂಧದಗುಡಿ ಹೆಸರಿನಲ್ಲಿ ಸಿನಿಮಾ ಮಾಡಿದ್ದರು. ಅಣ್ಣಾವ್ರ ಗಂಧದಗುಡಿ ಸಿನಿಮಾ ದಾಖಲೆ ಸೃಷ್ಟಿಸಿತ್ತು. ಶಿವಣ್ಣ ಅವರ ಗಂಧದ ಗುಡಿ ಸಾಕಷ್ಟು ಹೆಸರು ಮಾಡಿತ್ತು. ಇದೀಗ ಅದೇ ಹೆಸರಿನಲ್ಲಿ ಅಪ್ಪು ಅವರ ಡಾಕ್ಯುಮೆಂಟರಿ ಚಿತ್ರ ಸಿದ್ಧವಾಗಿದೆ ಸಿನಿಮಾದಲ್ಲಿ ಪ್ರಾಣಿ, ಪರಿಸರ ಸಂರಕ್ಷಣೆಯ ಕುರಿತಾಗಿ ಸಂದೇಶವನ್ನು ಸಾರುವ ಸಿನಿಮಾವನ್ನು ಮಾಡಿದ್ದರು. ಇದೀಗ ತಂದೆ ಮತ್ತು ಅಣ್ಣನ ಹಾದಿಯಲ್ಲೇ ಅಪ್ಪು ಕೂಡಾ ಇದೇ ರೀತಿಯ ಪ್ರಯೋಗವನ್ನು ಮಾಡಲು ಮುಂದಾಗಿದ್ದಾರೆ. ಟೀಸರ್ ನೋಡಿದ ಅಭಿಮಾನಿಗಳು ಸಖತ್ ಖುಷಿಯಾಗಿ ಮೆಚ್ಚುಗೆ ಸೂಚಿಸುತ್ತಿದ್ದಾರೆ.
PRK ಆಡಿಯೋ ಯೂಟ್ಯೂಬ್ ಚಾನೆಲ್‍ನಲ್ಲಿ ಇಂದು ಬೆಳಗ್ಗೆ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ಪ್ರಸಿದ್ಧ ಅರಣ್ಯಗಳನ್ನೆಲ್ಲಾ ಅಪ್ಪು ಸುತ್ತಿದ್ರು. ಕರ್ನಾಟಕದ ಸೌಂದರ್ಯವನ್ನು ಈ ಡಾಕ್ಯುಮೆಂಟರಿಯಲ್ಲಿ ತೋರಿಸಲಾಗಿದೆ. ಹೀಗಾಗಿ ಇದಕ್ಕೆ ಗಂಧದ ಗುಡಿ ಎಂದು ಹೆಸರಿಡಲಾಗಿದೆ. 1 ನಿಮಿಷ 20 ಸೆಕೆಂಡ್ ಇರುವ ಈ ಟೀಸರ್ ರೋಮಾಂಚನಕಾರಿಯಾಗಿದೆ. 5 ದಶಕಗಳ ನಂತರ ಮತ್ತೆ ಗಂಧದಗುಡಿ ಅಭಿಮಾನಿಗಳ ಎದುರು ಬರಲಿದೆ ಎನ್ನುವುದು ಸಂತೋಷದ ವಿಚಾರವಾಗಿದೆ.
