ಅಭಿವೃದ್ಧಿಯಲ್ಲಿ ಹಾಸನ ಕ್ಷೇತ್ರವನ್ನು ಇಡೀ ರಾಜ್ಯಕ್ಕೆ ನಂ.1 ಮಾಡೋದೇ ನಮ್ಮ ಗುರಿ: ಎಚ್.ಡಿ ರೇವಣ್ಣ – Vishwanews24
ಅಭಿವೃದ್ಧಿಯಲ್ಲಿ ಹಾಸನ ಕ್ಷೇತ್ರವನ್ನು ಇಡೀ ರಾಜ್ಯಕ್ಕೆ ನಂ.1 ಮಾಡೋದೇ ನಮ್ಮ ಗುರಿ: ಎಚ್.ಡಿ ರೇವಣ್ಣ – Vishwanews24
ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಸನ ಜಿಲ್ಲೆಯನ್ನು ಇಡೀ ರಾಜ್ಯಕ್ಕೆ ನಂ.1 ಮಾಡೋದೇ ನಮ್ಮ ಗುರಿ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಸೂರಜ್ ರೇವಣ್ಣ ಗೆಲುವಿನ ನಂತರ ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿ ಇದೆ. ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮಾಡಿದ ಅಭಿವೃದ್ಧಿ ಕೆಲಸ, ಸೇವೆ ಇಂದು ಸೂರಜ್ ಗೆಲುವಿಗೆ ಕಾರಣವಾಗಿದೆ. ಜಿಲ್ಲೆಯ ಆರು ಶಾಸಕರು, ಸಂಸದರು ಹಾಗೂ ದೇವೇಗೌಡರ ಆಶೀರ್ವಾದದ ಫಲವಾಗಿ ಸೂರಜ್ ಗೌಡ ಗೆಲುವು ಸಾಧಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಎಲ್ಲ ಪ್ರತಿನಿಧಿಗಳು ಸೂರಜ್ ಅವರನ್ನು ಪಕ್ಷಾತೀತವಾಗಿ ಗೆಲ್ಲಿಸಿದ್ದಾರೆ. ಈ ಗೆಲುವನ್ನು ಸಂಸದರು, ಶಾಸಕರು, ಕಾರ್ಯಕರ್ತರಿಗೆ ಅರ್ಪಿಸುತ್ತೇವೆ ಎಂದು ಹೇಳಿದರು.
ಪುತ್ತೂರು : 156 ವರ್ಷದ ಕಟ್ಟಡ ನೆಲಸಮ ಪ್ರಕರಣ: ವರದಿ ನೀಡುವಂತೆ ಡಿಸಿ ಸೂಚನೆ – VIshwanews24
