ಅಭ್ಯರ್ಥಿ ಯಾರೇ ಆಗಲಿ, ಬಿಜೆಪಿ ಪಕ್ಷ ಹಾಗೂ ಮೋದಿಗೋಸ್ಕರ ಕೆಲಸ ಮಾಡೋಣ : ಎ.ಹೆಚ್. ಬಸವರಾಜು – Vishwanews24
ಕುದೂರು : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಯಾರೇ ಆಗಿರಲಿ, ಅವರನ್ನು ಗೆಲ್ಲಿಸುವ ಮೂಲಕ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಬೇಕು ಎಂದು ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಹೆಚ್. ಬಸವರಾಜು ಹೇಳಿದ್ದಾರೆ.
ಬಿಜೆಪಿ ಮುಖಂಡರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಅವರು ಪ್ರಪಂಚ ಕಂಡ ಶ್ರೇಷ್ಠ ನಾಯಕ ವಿಶ್ವಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ನಾಯಕರಾಗಿದ್ದು, ಮೋದಿ ಅವರನ್ನು ಬೆಂಬಲಿಸಿ ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಬೇಕು ಎಂದು ಹೇಳಿದರು.
ಅಭ್ಯರ್ಥಿ ಯಾರೇ ಆದರೂ ಬಿಜೆಪಿ ಪಕ್ಷಕ್ಕೋಸ್ಕರ ದುಡಿಯೋಣ, ಹೋಬಳಿ ಹಾಗೂ ಗ್ರಾಮಗಳ ಮಟ್ಟದಲ್ಲಿ ಪ್ರತಿಯೊಬ್ಬ ಮುಖಂಡರೂ ಎಲ್ಲವನ್ನೂ ಒಟ್ಟುಗೂಡಿಸಿ ದೇಶದ ಅಭಿವೃದ್ಧಿ ಕಾರ್ಯಗಳನ್ನು ಮನವರಿಕೆ ಮಾಡಿ, ಎಲ್ಲರೂ ಸ್ಥಳೀಯವಾಗಿ ಪಕ್ಷವನ್ನು ಬೆಂಬಲಿಸಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಹೇಳಿದರು.
