ಅಮೂಲ್ಯಗೆ ಪೂರ್ತಿ ಮಾತನಾಡಲು ಅವಕಾಶ ಕೊಡಬೇಕಿತ್ತು: ಡಿಕೆಶಿ -Vishwanews24
ಬೆಂಗಳೂರು : ಸಿಎಎ ವಿರೋಧಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಕುರಿತಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಅಮೂಲ್ಯಗೆ ಪೂರ್ತಿ ಮಾತನಾಡಲು ಅವಕಾಶ ಕೊಡಬೇಕಿತ್ತು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮೂಲ್ಯಗೆ ಪೂರ್ತಿ ಮಾತನಾಡಲು ಅವಕಾಶ ನೀಡಬೇಕಿತ್ತು.ಆದರೆ ಮಧ್ಯದಲ್ಲಿ ಏನೋ ಸಮಸ್ಯೆಯಾಗಿದೆ. ಇದರ ಬಗ್ಗೆ ನನಗೆ ಇನ್ನೂ ಕೆಲವು ಸ್ಪಷ್ಟನೆಗಳು ಬೇಕಿದೆ. ಹೀಗಾಗಿ ಈ ಬಗ್ಗೆ ನಾನು ಹೆಚ್ಚಾಗಿ ಕಮೆಂಟ್ ಮಾಡುವುದಿಲ್ಲ ಎಂದರು.
ಸಿಎಎ ವಿರೋಧಿಸಿ ಗುರುವಾರ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲೇ ಅಮೂಲ್ ಯಲಿಯೋನಾ ಪಾಕಿಸ್ತಾನ್ ಜಿಂದಾಬಾದ್ ಎಂದು ಜೈಕಾರ ಕೂಗಿದ್ದಳು.
