ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು ; ಈ ವರ್ಷದಲ್ಲಿ 10ನೇ ಪ್ರಕರಣ – Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು – ಈ ವರ್ಷದಲ್ಲಿ 10ನೇ ಪ್ರಕರಣ

ನ್ಯೂಯಾರ್ಕ್‌: ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ದೂತಾವಾಸ ಶುಕ್ರವಾರ ತಿಳಿಸಿದೆ.

ಮೃತ ವಿದ್ಯಾರ್ಥಿನಿಯನ್ನು ಉಮಾ ಸತ್ಯ ಸಾಯಿ ಗಡ್ಡೆ ಎಂದು ಗುರುತಿಸಲಾಗಿದೆ. ಈ ಮೂಲಕ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಅನುಮಾನಾಸ್ಪದ ಸಾವಿನ ಸರಣಿ ಮುಂದುವರೆದಿದ್ದು, ಉಮಾ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ನ್ಯೂಯಾರ್ಕ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ರಂಗೇರಿದ ಶಿವಮೊಗ್ಗ ಲೋಕಸಭಾ ಕದನ : ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಕೋರ್ಟ್‌ ಮೊರೆ ಹೋದ ಈಶ್ವರಪ್ಪ – Vishwanews24

ಉಮಾ ಓಹಿಯೋದ ಕ್ಲೀವ್‍ಲ್ಯಾಂಡ್‍ನಲ್ಲಿ ವ್ಯಾಸಾಂಗ ಮಾಡುತ್ತಿದ್ದು ಭಾರತೀಯ ದೂತವಾಸ ಕಚೇರಿ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಮೃತಳ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಘೋಷಿಸಿದೆ.

2024 ರ ಆರಂಭದಿಂದ, US ನಲ್ಲಿ ಭಾರತೀಯ ಅಥವಾ ಭಾರತೀಯ ಮೂಲದ ವಿದ್ಯಾರ್ಥಿಗಳನ್ನು ಒಳಗೊಂಡ ಕನಿಷ್ಠ 10 ಸಾವುಗಳು ಸಂಭವಿಸಿವೆ.

Leave a Reply