ಅಯೋಧ್ಯೆ ಐತಿಹಾಸಿಕ ತೀರ್ಪುನೀಡಿದ ಪಂಚಪೀಠ ಸದಸ್ಯರಲ್ಲಿ ನ್ಯಾ. ಅಬ್ದುಲ್ ನಜೀರ್ ಮೂಡುಬಿದಿರೆಯ ಬೆಳುವಾಯಿಯವರು -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು:ಅಯೋಧ್ಯೆ ವಿವಾದಕ್ಕೆ  ಸುಪ್ರೀಂಕೋರ್ಟ್, ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂ ನ ಸಂವಿಧಾನಿಕ ಪಂಚಪೀಠವೂ ಸಿಜೆಐ ಗೋಗೊಯಿ, ಜಸ್ಟೀಸ್ ಎಸ್ ಎ ಬೋಬ್ಡೆ, ಜಸ್ಟೀಸ್ ಡಿವೈ ಚಂದ್ರಚೂಡ್, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಜಸ್ಟೀಸ್ ಅಬ್ದುಲ್ ನಝೀರ್ ಸದಸ್ಯರನ್ನು ಒಳಗೊಂಡಿದೆ.

ಪಂಚಪೀಠದ ಸದಸ್ಯರಲ್ಲಿ ಒಬ್ಬರಾಗಿರುವ ನ್ಯಾ. ಅಬ್ದುಲ್ ನಜೀರ್ ಕರಾವಳಿಯವರು. ನ್ಯಾಯಮೂರ್ತಿ ಅಬ್ದುಲ್ ನಜೀರ್ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಸಮೀಪದ ಬೆಳುವಾಯಿ ಗ್ರಾಮದವರು.

ಜ. 5, 1958ರ  ಜನವರಿ ಐದರಂದು ಜನಿಸಿದ ಎಸ್ ಎ ನಜೀರ್ ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದರು. ನಂತರ ಮಂಗಳೂರಿನ ಎಸ್ ಡಿಎಂ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ಧಾರೆ.

1983ರಲ್ಲಿ ಅಬ್ದುಲ್ ನಜೀರ್ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಅಭ್ಯಾಸ ಆರಂಭಿಸಿದರು.

2003ರಲ್ಲಿ ಹೈಕೋರ್ಟ್ ನ ಜಡ್ಜಾಗಿ ಆಯ್ಕೆಯಾದ ಇವರು 2017ರಲ್ಲಿ ಸುಪ್ರೀಂ ಕೋರ್ಟ್ ಜಡ್ಜ್ ಆಗಿ ನೇಮಕವಾಗಿದ್ದರು. ಐತಿಹಾಸಿಕ ತ್ರಿವಳಿ ತಲಾಖ್ ಪ್ರಕರಣದ ಪಂಚ ಸದಸ್ಯ ಪೀಠದ ಏಕಮಾತ್ರ ಮುಸ್ಲಿಂ ನ್ಯಾಯಾಧೀಶರಾಗಿದ್ದರು.