ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ -vishwanews24

Featured, ರಾಷ್ಟ್ರ ನ್ಯೂಸ್

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ

ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ.

ಸಿಇಓ ಆಗಿ ನೇಮಕ ಆಗಿರುವ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ಅವರು ಆಪರೇಷನ್ ಸಿಂಧೂರದ ಸಮಯದಲ್ಲಿ ಜಿತೇಂದ್ರ ಮಿಶ್ರಾ ಅವರು ಪಶ್ಚಿಮ ವಾಯು ಕಮಾಂಡ್ ಮುಖ್ಯಸ್ಥರಾಗಿದ್ದರು. ಜೊತೆಗೆ ಅನುಭವಿ ಯುದ್ಧ ವಿಮಾನ ಪೈಲಟ್ ಆಗಿದ್ದಾರೆ.

ಈಗಾಗಲೇ ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮೂವರು ಹೊಸ ಟ್ರಸ್ಟಿಗಳ ನೇಮಕ ಮಾಡಿದೆ. ದೆಹಲಿ ಮೂಲದ ಮಹೇಶ್ ಭಾಗ್ಚಂದ್ಕ, ಅಯೋಧ್ಯೆಯ ನಿವಾಸಿ ಮದನ್ ಮೋಹನ್ ಪಾಂಡೆ ಹಾಗೂ ಶಿಕೋಹಾಬಾದ್‌ನ ನಿರ್ಮಲಾ ಯಾದವ್ ಅವರನ್ನು ಹೊಸ ಟ್ರಸ್ಟಿಗಳನ್ನಾಗಿ ನೇಮಿಕ ಮಾಡಲಾಗಿದೆ.

ಮಹೇಶ್ ಭಾಗ್‌ಚಂದ್ಕಾ ಅವರು ದಿವಂಗತ ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಅವರ ಸಂಬಂಧಿ ಎಂದು ತಿಳಿದುಬಂದಿದೆ. ಇನ್ನೂ ಮದನ್ ಮೋಹನ್ ಪಾಂಡೆ ಮತ್ತು ನಿರ್ಮಲಾ ಯಾದವ್ ಅವರ ಹೆಸರನ್ನು ನೇಮಕಾತಿಯ ಕುರಿತು ರಾಮಮಂದಿರ ಟ್ರಸ್ಟ್‌ನ ಪ್ರಮುಖ ಸಭೆಯಲ್ಲಿ ನಿರ್ಧರಿಸಲಾಗಿದೆ.

Leave a Reply