ಅಯೋಧ್ಯೆಯಲ್ಲಿ ರಾಮಲಲ್ಲಾ  ಪ್ರಾಣಪ್ರತಿಷ್ಠೆ – ಶತಮಾನಗಳ ಕನಸು ನನಸಾಗಲು ಕ್ಷಣಗಣನೆ  – vishwanews24

Featured, ರಾಷ್ಟ್ರ ನ್ಯೂಸ್

ಅಯೋಧ್ಯೆಯಲ್ಲಿ ರಾಮಲಲ್ಲಾ  ಪ್ರಾಣಪ್ರತಿಷ್ಠೆ – ಶತಮಾನಗಳ ಕನಸು ನನಸಾಗಲು ಕ್ಷಣಗಣನೆ 

ಅಯೋಧ್ಯೆ ಬಾಲರಾಮನಿಗೆ ಮೊದಲ ಮಜ್ಜನ

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿಂದು ರಾಮಲಲ್ಲಾ  ಪ್ರಾಣಪ್ರತಿಷ್ಠೆ ನೆರವೇರಲಿದೆ. ಈಗಾಗಲೇ ರಾಮಲಲ್ಲಾಗೆ 114 ಕ್ಷೇತ್ರಗಳಿಂದ ತರಿಸಲಾಗಿದ್ದ ನೀರಿನಿಂದ ಮೊದಲ ಮಜ್ಜನ ಮಾಡಿಸಲಾಗಿದೆ.

ರಾಮಮಂದಿರದ 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದು, ಸೋಮವಾರ ಸುಮಾರು 5 ಗಂಟೆ ಮೋದಿ ಅವರು ಅಯೋಧ್ಯೆಯಲ್ಲಿಯೇ ಕಾಲ ಕಳೆಯಲಿದ್ದಾರೆ.

ಬಿಲ್ಕಿಸ್‌ ಬಾನೊ ಪ್ರಕರಣ :  ಎಲ್ಲಾ 11 ಅಪರಾಧಿಗಳು ಗುಜರಾತ್‌ ಜೈಲಿನಲ್ಲಿ ಶರಣಾಗತಿ – vishwanews24

ರಾಮಲಲ್ಲಾಗೆ ಮೊದಲ ಮಜ್ಜನ: ಅಯೋಧ್ಯೆಯ ಗರ್ಭಗುಡಿ ಪ್ರವೇಶಿಸಿರುವ ರಾಮಲಲ್ಲಾ ಮೂರ್ತಿಗೆ ಸೋಮವಾರ ಮೊದಲ ಬಾರಿಗೆ ಸ್ನಾನ ಮಾಡಿಸಲಾಗಿದೆ. ಸುಮಾರು 114 ತೀರ್ಥಕ್ಷೇತ್ರಗಳಿಂದ ತಂದ ನೀರಿನಲ್ಲಿ ರಾಮಲಲ್ಲಾ ಮೂರ್ತಿಗೆ ಮಹಾಮಜ್ಜನ ಮಾಡಿಸಲಾಗಿದೆ.

Leave a Reply