ಅರ್ಜಿ ಸಲ್ಲಿಕೆ : ಅವಧಿ ವಿಸ್ತರಣೆ – VIshwanews24

Featured, ಉಡುಪಿ

ಅರ್ಜಿ ಸಲ್ಲಿಕೆ : ಅವಧಿ ವಿಸ್ತರಣೆ

ಉಡುಪಿ,: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ
ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಪ್ರವರ್ಗ-1, ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ
ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ
ಸೌಲಭ್ಯಕ್ಕಾಗಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 31 ರ ವರೆಗೆ ವಿಸ್ತರಿಸಲಾಗಿದೆ.

ಶುಲ್ಕ ವಿನಾಯಿತಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ನವೀಕರಣ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಂಜೂರು ಮಾಡುವ ಪ್ರಕ್ರಿಯೆ
ಪ್ರಗತಿಯಲ್ಲಿದ್ದು, ಸದರಿ ವಿದ್ಯಾರ್ಥಿಗಳಿಗೆ ಒಂದು ತಿಂಗಳ ಒಳಗೆ ಶುಲ್ಕ ಮರುಪಾವತಿಯನ್ನು ಮಂಜೂರು ಮಾಡಿ, ಆಧಾರ್
ಜೋಡಣೆಯಾಗಿರುವ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಜಮೆ ಮಾಡಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ http://www.ssp.postmatric.karnataka.gov.in ವೆಬ್‌ಸೈಟ್ ಅಥವಾ ಇಲಾಖಾ
ಸಹಾಯವಾಣಿ ಸಂಖ್ಯೆ: 8050770005, 8050770004 ಅನ್ನು ಸಂಪರ್ಕಿಸುವAತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಕಾರು – ಕಂಟೈನರ್ ಢಿಕ್ಕಿ – ಓರ್ವ ಮೃತ್ಯು, ಇಬ್ಬರಿಗೆ ಗಾಯ – Vishwanews24

Leave a Reply