ಅಶ್ಲೀಲ ಚಲನಚಿತ್ರಗಳ ಪ್ರಕರಣ: ನಟಿ ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಬಂಧನ -Vishwanews24

Featured, ರಾಷ್ಟ್ರ ನ್ಯೂಸ್

ಅಶ್ಲೀಲ ಚಲನಚಿತ್ರಗಳ ಪ್ರಕರಣ: ನಟಿ ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಬಂಧನ -Vishwanews24

ಮುಂಬೈ: ಅಶ್ಲೀಲ ಚಿತ್ರಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂಬೈ ಪೊಲೀಸರು ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರ ಅವರನ್ನು ಬಂಧಿಸಿದ್ದಾರೆ.

ಉದ್ಯಮಿ ರಾಜ್ ಕುಂದ್ರ ಅವರನ್ನು ಪೋರ್ನ್ ಚಲನಚಿತ್ರಗಳನ್ನು ಸೃಷ್ಟಿಸಿ ಆಪ್ ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದ ಅಡಿ ಬಂಧಿಸಲಾಗಿದೆ ಎಂದು ಮುಂಬೈ ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕ್ರೈಮ್ ಬ್ರಾಂಚ್ ನ ಅಧಿಕಾರಿಗಳು ಈ ಕಾರ್ಯಾಚರಣೆಯನ್ನು ನಡೆಸಿದ್ದು, ಕುಂದ್ರ ಅವರು ಪ್ರಮುಖ ಆರೋಪಿಯಾಗಿದ್ದಾರೆ.

“ಪೋರ್ನ್ ಸಿನಿಮಾಗಳನ್ನು ಸೃಷ್ಟಿಸಿ ಅದನ್ನು ಆಪ್ ಗಳ ಮೂಲಕ ಪ್ರಸಾರ ಮಾಡಲಾಗುತ್ತಿದೆ ಎಂದು 2021 ರ ಫೆಬ್ರವರಿ ತಿಂಗಳಲ್ಲಿ ಮುಂಬೈ ನ ಕ್ರೈಮ್ ಬ್ರಾಂಚ್ ಪೊಲೀಸರಿಗೆ ದೂರು ಬಂದಿತ್ತು. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರು ಪ್ರಮುಖ ಆರೋಪಿ ಎಂಬುದಕ್ಕೆ ಸಾಕ್ಷ್ಯಗಳು ಲಭ್ಯವಾಗಿದ್ದು ಅವರನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ವಿವರಿಸಿದ್ದಾರೆ.