ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಭೇಟಿ ನೀಡುತ್ತಿದ್ದಾರೆ. ಆಗಸ್ಟ್ 1 ರಂದು ಮೈಸೂರಿಗೆ ಭೇಟಿ ನೀಡಲಿರುವ ಅವರು, ಶ್ರೀ ರಾಮಕೃಷ್ಣ ಆಶ್ರಮದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮೈಸೂರಿಗೂ ಅವಿನಾಭಾವ ನಂಟಿದೆ. ನರೇಂದ್ರ ಮೋದಿ ಅವರು ಹಿಂದೆ ಮುಖ್ಯಮಂತ್ರಿಗಳಾಗಿದ್ದಾಗಿದ್ದಾಗಲೂ 3 ಬಾರಿ ಮೈಸೂರಿಗೆ ಭೇಟಿ ನೀಡಿದ್ದಾರೆ. 2004ರ ಅಕ್ಟೋಬರ್ನಲ್ಲಿ ಪುರಭವನದಲ್ಲಿ ಆಂಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮೋದಿ ಪಾಲ್ಗೊಂಡಿದ್ದರು. ಅಂದು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ 28 ಅಕ್ಟೋಬರ್ 2009 ರಂದು ಹಮ್ಮಿಕೊಂಡಿದ್ದ ದಸರಾ ಪಂಜಿನ ಕವಾಯತು ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದರು. ಮರುದಿನ ನಂಜನಗೂಡು ತಾಲ್ಲೂಕಿನ ಸುತ್ತೂರು ಮಠದಲ್ಲಿ ನಡೆದ ಚಿಂತನಾ ಶಿಬಿರದಲ್ಲಿ ಭಾಗವಹಿಸಿ ಆಡಳಿತಕ್ಕೆ ಸಂಬಂಧಿಸಿದಂತೆ ಗೋಷ್ಠಿಯಲ್ಲಿ ಪಾಲ್ಗೊಂಡ್ದಿರು.
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24
2014 ಏಪ್ರಿಲ್ 8 ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಲೋಕಸಭಾ ಅಭ್ಯರ್ಥಿ ಪ್ರತಾಪ್ ಸಿಂಹ ಪರವಾಗಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ವಾತನಾಡಿದ್ದರು
