ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ನಾಳೆ ಪ್ರಮಾಣವಚನ ಸ್ವೀಕಾರ – vishwanews24
ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ನಾಳೆ ಪ್ರಮಾಣವಚನ ಸ್ವೀಕಾರ
ಅಮರಾವತಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಗೆ ನಾಳೆ(ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್ ನಲ್ಲಿ ಬೆಳಿಗ್ಗೆ 11.27ಕ್ಕೆ ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಉಡುಪಿ: ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಗೆ ಪ್ರವಾಸಿಗರಿಗೆ ನಿಷೇಧ – vishwanews24
ಟಿಡಿಪಿ ಶಾಸಕಾಂಗ ಪಕ್ಷದ ನಾಯಕರಾಗಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಆಯ್ಕೆ ಮಾಡಲಾಗಿದೆ. ಜತೆಗೆ, ಇಂದು ನಡೆದ ಎನ್ಡಿಎ ಮೈತ್ರಿಪಕ್ಷಗಳ ಶಾಸಕರ ಸಭೆಯಲ್ಲೂ ನಾಯ್ಡು ಅವರನ್ನು ತಮ್ಮ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಟಿಡಿಪಿ, ಬಿಜೆಪಿ ಮತ್ತು ಜನಸೇನಾ ನಾಯಕರನ್ನು ಒಳಗೊಂಡ ಎನ್ಡಿಎ ಬಣದ ನಾಯಕರು ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಸತತ 2ನೇ ಅವಧಿಗೆ ವಿದೇಶಾಂಗ ಸಚಿವರಾಗಿ ಅಧಿಕಾರ ವಹಿಸಿಕೊಂಡ ಜೈ ಶಂಕರ್ – vishwanews24
ಪ್ರಧಾನಿ ನರೇಂದ್ರ ಮೋ ದಿ ಸೇರಿದಂತೆ ಎನ್ಡಿಎ ಮೈತ್ರಿಕೂಟದ ನಾಯಕರು ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
