ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ
ಮಂಗಳೂರು : ಮುಂಬರುವ ಆಗಸ್ಟ್ 17ರ ಸೋಮವಾರದಂದು ಕರಾವಳಿಯ ಪವಿತ್ರ ಹಬ್ಬ ‘ನಾಗರ ಪಂಚಮಿ’ ಇರುವುದರಿಂದ, ಹಿಂದೂ ಧಾರ್ಮಿಕ ಭಾವನೆಗಳನ್ನು ಗೌರವಿಸಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24
ಈ ಕುರಿತು ಹೇಳಿಕೆ ನೀಡಿರುವ ಶಾಸಕರು, “ದೈವ-ದೇವರುಗಳ ನೆಲೆವೀಡಾದ ತುಳುನಾಡಿನಲ್ಲಿ ನಾಗರಾಧನೆಗೆ ಅತ್ಯಂತ ವಿಶಿಷ್ಟ ಹಾಗೂ ಪ್ರಮುಖ ಸ್ಥಾನವಿದೆ. ಕರಾವಳಿಯ ಪ್ರತಿಯೊಂದು ಕುಟುಂಬಕ್ಕೂ ತಮ್ಮದೇ ಆದ ನಾಗನ ಮೂಲಸ್ಥಾನವಿದ್ದು, ವರ್ಷಕ್ಕೊಮ್ಮೆ ಕುಟುಂಬ ಸಮೇತರಾಗಿ ಅಲ್ಲಿಗೆ ತೆರಳಿ ವಿಶೇಷ ತನು-ಅಭಿಷೇಕ ಹಾಗೂ ಪೂಜೆ ಸಲ್ಲಿಸುವುದು ಪಾರಂಪರಿಕವಾಗಿ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ” ಎಂದು ತಿಳಿಸಿದ್ದಾರೆ.
“ನಾಗರ ಪಂಚಮಿಯಂದು ರಜೆ ನೀಡದಿದ್ದರೆ ಕುಟುಂಬಗಳು ಒಟ್ಟಾಗಿ ಹಬ್ಬ ಆಚರಿಸಲು ತೊಡಕಾಗುತ್ತದೆ. ಹಿಂದೂಗಳು ಮಾತ್ರವಲ್ಲದೆ ಜೈನ ಧರ್ಮೀಯರೂ ಕೂಡ ಈ ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಆಚರಿಸುತ್ತಾರೆ. ಆದ್ದರಿಂದ ಕರಾವಳಿ ಉಭಯ ಜಿಲ್ಲೆಗಳಲ್ಲಿ ಆಗಸ್ಟ್ 17 ರಂದು ಸ್ಥಳೀಯ ರಜೆ ಘೋಷಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ತಕ್ಷಣವೇ ಕ್ರಮವಹಿಸಬೇಕು” ಎಂದು ಶಾಸಕರು ಆಗ್ರಹಿಸಿದ್ದಾರೆ.
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ – vishwanews24
