ಆಜಾನ್ ವಿರುದ್ಧ ಮತ್ತೆ ಸಮರ : ಮಸೀದಿ ಧ್ವನಿವರ್ಧಕ ವಿರುದ್ಧ ಆ. 23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಶ್ರೀರಾಮಸೇನೆ ಕರೆ – Vishwanews24
ಆಜಾನ್ ವಿರುದ್ಧ ಮತ್ತೆ ಸಮರ : ಮಸೀದಿ ಧ್ವನಿವರ್ಧಕ ವಿರುದ್ಧ ಆ. 23ರಂದು ರಾಜ್ಯಾದ್ಯಂತ
ಬೃಹತ್ ಪ್ರತಿಭಟನೆಗೆ ಶ್ರೀರಾಮಸೇನೆ ಕರೆ
ಕಲಬುರಗಿ: ರಾಜ್ಯದಲ್ಲಿ ಸ್ವಲ್ಪ ದಿನ ಬಿಡುವು ನೀಡಿದ್ದ ಆಜಾನ್ ಯುದ್ಧ ಮತ್ತೆ ಸದ್ದು ಮಾಡ್ತಿದೆ. ಮಸೀದಿಗಳು ಧ್ವನಿ ವರ್ಧಕಗಳ ನಿಯಮ ಉಲ್ಲಂಘನೆ ಮಾಡುತ್ತಿದ್ದರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಜಾನ್ ವಿರುದ್ಧ ಹಿಂದೂ ಸಂಘಟನೆಗಳು ಹೋರಾಟಕ್ಕೆ ನಿರ್ಧರಿಸಿವೆ.
ಮಸೀದಿ ಧ್ವನಿವರ್ಧಕ ವಿರುದ್ಧ ಆಗಸ್ಟ್ 23ರಂದು, ರಾಜ್ಯಾದ್ಯಂತ ಶ್ರೀರಾಮಸೇನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಎಲ್ಲಾ ಜಿಲ್ಲೆಯ ಎಸ್‌ಪಿ ಕಚೇರಿಗಳ ಎದುರು ಪ್ರತಿಭಟನೆ ಮಾಡೋದಾಗಿ ಶ್ರೀರಾಮಸೇನೆ ಕರೆ ನೀಡಿದೆ.
ಈ ಕುರಿತು ಮಾತನಾಡಿರುವ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು, ರಾಜ್ಯದ ಅನೇಕ ಮಸೀದಿಗಳಲ್ಲಿ ಇನ್ನೂ ಅನಧಿಕೃತವಾಗಿ ಆಜಾನ್ ಕೂಗಲು ಮೈಕ್‌ಗಳನ್ನು ಬಳಸಲಾಗುತ್ತಿದೆ. ಸರ್ಕಾರದ ಸುತ್ತೋಲೆಯಂತೆ ಕಡಿಮೆ ಡೆಸಿಬಲ್ ಬಳಸುತ್ತಿಲ್ಲ. ಹೀಗಾಗಿ ಆಗಸ್ಟ್ 23 ರಂದು ಹೋರಾಟದ ಜೊತೆಗೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.
ಕು೦ದಾಪುರದಿ೦ದ ಭಟ್ಕಳಕ್ಕೆ ಕಾರಿನಲ್ಲಿಅಕ್ರಮ ಗೋ ಮಾಂಸ ಸಾಗಾಟ ಪತ್ತೆ: ಓರ್ವನ ಬಂಧನ – Vishwanews24
