ಆದಾಯ ತೆರಿಗೆ ಪಾವತಿಸಲು ಆಧಾರ್ ಕಾರ್ಡ್ ಕಡ್ಡಾಯ : ಸುಪ್ರೀಂ ಕೋರ್ಟ್ – Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ಆದಾಯ ತೆರಿಗೆ ಪಾವತಿಸಲು ಇನ್ನು ಮುಂದೆ ಪಾನ್ ಕಾರ್ಡಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದು ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ.

ದೆಹಲಿ ಹೈಕೋರ್ಟ್ ಐಟಿ ರಿಟರ್ನ್ಸ್ ಸಲ್ಲಿಕೆಗೆ ಆಧಾರ್ ಕಡ್ಡಾಯವಲ್ಲ ಎಂದು ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಸರ್ಕಾರದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಐಟಿ ರಿಟರ್ನ್ಸ್ ಪಾವತಿ ಮಾಡಲು 2018-19 ಸಾಲಿಗೆ ಆಧಾರ್ ಕಡ್ಡಾಯ ಮಾಡಿ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ಆಧಾರ್ ಕಾರ್ಡಿಗೆ ಇರುವ ಸಂವಿಧಾನಿಕ ಮಾನ್ಯತೆಯನ್ನು ಸೆಪ್ಟೆಂಬರ್ ತೀರ್ಪಿನಲ್ಲಿ ಎತ್ತಿ ಹಿಡಿದಿತ್ತು.ಈಗ ನ್ಯಾಯಾಲಯ ಐಟಿ ರಿಟರ್ನ್ಸ್ ಸಲ್ಲಿಕೆ ಮಾಡಲು ವೈಯಕ್ತಿಕ ಆಧಾರ್ ಸಂಖ್ಯೆಯನ್ನು ಒದಗಿಸುವುದನ್ನು ಕಡ್ಡಾಯ ಮಾಡಿದೆ. ಅಲ್ಲದೆ ಆಧಾರ್ ಕಾರ್ಡನ್ನು ಪಾನ್ ಕಾರ್ಡಿಗೆ ಲಿಂಕ್ ಮಾಡಲು 2019 ಮಾರ್ಚ್ 31 ರವರೆಗೂ ಸಮಯಾವಕಾಶವನ್ನು ನೀಡಿದೆ.