ಇಂಜಿನಿಯರ್ ಗಳಿಗೆ ಶಾಕಿಂಗ್ ನ್ಯೂಸ್ : ರಸ್ತೆಗುಂಡಿಯಾದರೆ ಪ್ರತಿ ಗುಂಡಿಗೆ 1 ಸಾವಿರ ರೂ. ದಂಡ -Vishwanews24
ಬೆಂಗಳೂರು: ಇಂಜಿನಿಯರ್ ಗಳಿಗೆ ಬಿಬಿಎಂಪಿ ಶಾಕ್ ನೀಡಿದ್ದು, ಅವೈಜ್ಞಾನಿಕವಾಗಿ ಗುಂಡಿ ಮುಚ್ಚಿದರೆ ಪ್ರತಿ ಗುಂಡಿಗೆ 1 ಸಾವಿರ ರೂ. ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.
ದಕ್ಷಿಣ ವಲಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ, ಪಾದಚಾರಿ ಮಾರ್ಗ ದುರಸ್ತಿಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಮೇಯರ್ ಗಂಗಾಂಬಿಕೆ ಮಂಗಳವಾರ ವಲಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಿದರು.
ವಾರ್ಡ್ ಮಟ್ಟದಲ್ಲಿನ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು. ಪ್ರಮುಖವಾಗಿ ರಸ್ತೆ ಗುಂಡಿ, ಬೀದಿ ದೀಪ, ಕಸದ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ವಾರ್ಡ್ ನಲ್ಲಿ ಪರಿಶೀಲನೆ ನಡೆಸಿ ಸಮಸ್ಯೆಗಳ ಪಟ್ಟಿ ಮಾಡಬೇಕು. ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಇಂಜಿನಿಯರ್ಗಳಿಗೆ ಸೂಚಿಸಿದರು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿ ಕೊಳ್ಳುವುದು ಪ್ರತಿ ಇಂಜಿನಿಯರ್ ಜವಾಬ್ದಾರಿ. ವೈಜ್ಞಾನಿಕವಾಗಿ ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಅವೈಜ್ಞಾನಿಕವಾಗಿ ಗುಂಡಿ ಮುಚ್ಚಿದರೆ ಗುಂಡಿಗೆ 1 ಸಾವಿರ ರೂ.ನಂತೆ ಇಂಜಿನಿಯರ್ಗಳಿಗೆ ದಂಡ ವಿಧಿಸಲಾಗುತ್ತದೆ ಎಂದು ಬಿಬಿಎಂಪಿ ಪ್ರಧಾನ ಇಂಜಿನಿಯರ್ ಎಂ.ಆರ್. ವೆಂಕಟೇಶ್ ತಿಳಿಸಿದರು.
