ಇಂಥ ಪರಿಸ್ಥಿತಿಯಲ್ಲಿ ಭಾರತವು ಶ್ರೀಲಂಕಾದ ಜತೆಗಿದೆ : ಪ್ರಧಾನಿ ಮೋದಿ – Vishwanews24
ನವದೆಹಲಿ, : ಸಂಕಷ್ಟದ ಪರಿಸ್ಥಿತಿಯಲ್ಲಿ ಭಾರತವು ಶ್ರೀಲಂಕಾ ಜತೆಯಲ್ಲಿ ನಿಲ್ಲಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಶ್ರೀಲಂಕಾದಲ್ಲಿ ನಡೆದ ಭೀಕರ ಘಟನೆಯನ್ನು ಖಂಡಿಸುತ್ತೇನೆ. ನಮ್ಮ ನಡುವೆ ಇಂಥ ಘಟನೆಗಳಿಗೆ ಆಸ್ಪದವೇ ಇಲ್ಲ. ಇಂಥ ಸಂಕಷ್ಟದ ಪರಿಸ್ಥಿತಿಯಲ್ಲಿ ಭಾರತವು ಶ್ರೀಲಂಕಾ ಜತೆಯಲ್ಲಿ ನಿಲ್ಲಲಿದೆ. ಅಸುನೀಗಿದವರಿಗೆ ನನ್ನ ಶ್ರದ್ಧಾಂಜಲಿಯನ್ನು ಅರ್ಪಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಕ್ರೈಸ್ತರ ಪವಿತ್ರ ಹಬ್ಬ ಈಸ್ಟರ್ ದಿನ (ಏ.21) ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಭೀಕರ ಆತ್ಮಾಹುತಿ ದಾಳಿ ನಡೆದಿತ್ತು. ಚರ್ಚ್ಗಳಲ್ಲಿ ಪ್ರಾರ್ಥನೆಯಲ್ಲಿ ನಿರತರಾಗಿದ್ದವರ ಮೇಲೆ ಮತ್ತು ವಿಲಾಸಿ ಹೊಟೇಲಿನಲ್ಲಿ ತಂಗಿದ್ದವರನ್ನು ಗುರಿಯಾಗಿಸಿಕೊಂಡು ಬಾಂಬ್ ಸ್ಫೋಟಿಸಲಾಗಿದ್ದು, ಕನಿಷ್ಠ 215 ಮಂದಿ ಸಾವಿಗೀಡಾಗಿದ್ದಾರೆ. 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಸರಣಿ ಬಾಂಬ್ ಸ್ಫೋಟದ ಬಳಿಕ ದೇಶಾದ್ಯಂತ ಕರ್ಫ್ಯೂ ಜಾರಿಗೊಳಿಸಲಾಗಿದೆ. ವಿಮಾನ ನಿಲ್ದಾಣ ಸಹಿತ ಆಯಕಟ್ಟಿನ ತಾಣಗಳಲ್ಲಿ ಬಂದೋಬಸ್ತ್ ಹೆಚ್ಚಿಸಲಾಗಿದೆ. ದೇಶಾದ್ಯಂತ ಕಟ್ಟೆಚ್ಚರ ಘೋಷಿಸಲಾಗಿದೆ.
