ಇಂದಿನಿಂದ ಉಡುಪಿಯಲ್ಲಿ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ: ಯಶ್ ಪಾಲ್ ಸುವರ್ಣ – Vishwanews24
ಇಂದಿನಿಂದ ಉಡುಪಿಯಲ್ಲಿ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ: ಯಶ್ ಪಾಲ್ ಸುವರ್ಣ
ಉಡುಪಿ: ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಭಾರತ್ ಅಕ್ಕಿ ಮಾರಾಟಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರು ಫೆಬ್ರವರಿ 28 ಬುಧವಾರದಂದು ಬೆಳಿಗ್ಗೆ 9.30ಕ್ಕೆ ಆದಿಉಡುಪಿ ಸಂತೆ ಮಾರ್ಕೆಟ್ ಬಳಿ ಚಾಲನೆ ನೀಡಲಿದ್ದಾರೆ.
ಉತ್ತಮ ಗುಣಮಟ್ಟದ ಅಕ್ಕಿಯನ್ನು ಕೇಂದ್ರ ಸರಕಾರ ಸಬ್ಸಿಡಿ ದರದಲ್ಲಿ ಪ್ರತಿ ಕೆಜಿಗೆ ರೂ. 29 ರಂತೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ವಿವಿಧ ಭಾಗದಲ್ಲಿ ಭಾರತ್ ಅಕ್ಕಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುರತ್ಕಲ್: ನಾಪತ್ತೆಯಾಗಿದ್ದ ನಾಲ್ವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮೃತದೇಹ ಪತ್ತೆ – Vishwanews24
