ಇಂದಿನಿಂದ ದ. ಕ.- ಉಡುಪಿ ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ ; ಯಲ್ಲೋ ಅಲರ್ಟ್‌  ಘೋಷಣೆ – Vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಇಂದಿನಿಂದ ದಕ್ಷಿಣ ಕನ್ನಡ-ಉಡುಪಿ ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ ; ಯಲ್ಲೋ ಅಲರ್ಟ್‌  ಘೋಷಣೆ

ಬೆಂಗಳೂರು: ದಕ್ಷಿಣ ಕನ್ನಡ-ಉಡುಪಿ ಸೇರಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಾ.6ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ನೀಡಿದೆ.

ಇದೇ ವೇಳೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ ಮತ್ತು ತುಮಕೂರು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹಳೆಯಂಗಡಿ : ವರನ ಮೊದಲ ಪತ್ನಿ ಮದುವೆ ಮಂಟಪಕ್ಕೆ ಎಂಟ್ರಿ ; ವಧುವಿನೊಂದಿಗೆ ಮದುವೆ ಮಂಟಪದಿಂದ ವರ ಎಸ್ಕೇಪ್ – Vishwanews24

Leave a Reply