ಇಂದು ಕರಾವಳಿ ಸೇರಿದಂತೆ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ..! – vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಇಂದು ಕರಾವಳಿ ಸೇರಿದಂತೆ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಹವಾಮಾನ ಇಲಾಖೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ‌ ಭಾರೀ ಮಳೆ ಬೀಳಲಿದೆ.

ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಇಂದೂ‌ ಸಹ ಮಳೆಯಾಗಲಿದೆ. ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ – vishwanews24

Leave a Reply