ಇಂದು ಗೀತಾ ಶಿವರಾಜ್ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ – Vishwanews24

Featured, ರಾಜ್ಯ ನ್ಯೂಸ್

ಇಂದು ಗೀತಾ ಶಿವರಾಜ್ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರ ಪುತ್ರಿ ಗೀತಾ ಅವರು 2014 ರಲ್ಲಿ ಜೆಡಿಎಸ್ ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.

Breaking-ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ 'ದೊಡ್ಮನೆ ಸೊಸೆ' ಗೀತಾ ಶಿವರಾಜ್ ಕುಮಾರ್

ಈ ವೇಳೆ ಜೆಡಿಎಸ್ ನಲ್ಲಿ ಜೊತೆಗೆ ಸಹೋದರ ಮಧುಬಂಗಾರಪ್ಪ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿ ಸೊರಬದಿಂದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಇಂದು ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಉಡುಪಿ: ಮೀನು ಮುಟ್ಟಿದ್ದರಿಂದ ದೇವಸ್ಥಾನದ ಒಳಗೆ ಹೋಗಲು ನಿರಾಕರಿಸಿದ ರಾಹುಲ್ ಗಾಂಧಿ – Vishwanews24

ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್ ಇಂದು ಮಧ್ಯಾಹ್ನ 12ಕ್ಕೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಅವರನ್ನು ಕಾಂಗ್ರೆಸ್ ಮುಖಂಡರು ಬರಮಾಡಿಕೊಳ್ಳಲಿದ್ದಾರೆ. ಮಧು ಬಂಗಾರಪ್ಪ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

Leave a Reply