ಇಂದು ಮಂಗಳೂರಿಗೆ ಪ್ರಧಾನಿ – ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ ಕನ್ನಡದಲ್ಲಿ ಮೋದಿ ಟ್ವೀಟ್ – Vishwanews24
ಇಂದು ಮಂಗಳೂರಿಗೆ ಪ್ರಧಾನಿ – ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ ಕನ್ನಡದಲ್ಲಿ ಮೋದಿ ಟ್ವೀಟ್
ಮಂಗಳೂರು : ಪ್ರಧಾನಿ ನರೇಂದ್ರ ಮೋದಿಯವರಿಂದ ಮಂಗಳೂರಿಗೆ ಆಗಮಿಸುತ್ತಿದ್ದು, ಈ ಸಂತಸದ ಸುದ್ದಿಯನ್ನು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ ಎಂದಿದ್ದಾರೆ.
ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ.
— Narendra Modi (@narendramodi) September 1, 2022
ಕರ್ನಾಟಕದ ಕರಾವಳಿ ಭಾಗಕ್ಕೆ ಕೇಂದ್ರ ಸರ್ಕಾರದಿಂದ ನಾನಾ ಹೊಸ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನ ಕುಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ಇಂದು ನೆರವೇರಿಸಲಿದ್ದಾರೆ.
