ಇಂದು ಸಂಜೆ ಕಾಂಗ್ರೆಸ್ ಪಕ್ಷಕ್ಕೆ  ಲಕ್ಷ್ಮಣ್‌ ಸವಧಿ ಸೇರ್ಪಡೆ : ಡಿ.ಕೆ.ಶಿವಕುಮಾರ್‌ – Vishwanews24

Featured, ರಾಜ್ಯ ನ್ಯೂಸ್

ಇಂದು ಸಂಜೆ ಕಾಂಗ್ರೆಸ್ ಪಕ್ಷಕ್ಕೆ  ಲಕ್ಷ್ಮಣ್‌ ಸವಧಿ ಸೇರ್ಪಡೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್‌ ಸವಧಿ ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಲಕ್ಷ್ಮಣ್‌ ಸವಧಿ ಒಪ್ಪಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, ನಮ್ಮ ಕುಟುಂಬದ ಸದಸ್ಯರಾಗಲು ನಿರ್ಧಾರಿಸಿದ್ದಾರೆ . ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್‌ ಸವಧಿ ಒಪ್ಪಿದ್ದಾರೆ. ಸಂಜೆ 4 ಗಂಟೆಗೆ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗುವ ಬಗ್ಗೆ ಘೋಷಣೆ ಮಾಡಲಿದ್ದಾರೆ. ಲಕ್ಷ್ಮಣ್‌ ಸವಧಿ ಅವರನ್ನು ಹೈಕಾಮಾಂಡ್‌ ಎಲ್ಲಾ ನಾಯಕರು ಒಪ್ಪಿದ್ದಾರೆ. ಸಂಜೆ 4 ಗಂಟೆಗೆ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಶಾಸಕ ಅಲ್ಲದಿದ್ದರೂ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಸಿಕ್ಕಿದ್ದು ಹೇಗೆ? | How and Why  non MLA Laxman Savdhi get minister post - Kannada Oneindia

ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಲಕ್ಷ್ಮಣ್‌ ಸವಧಿ ಮಾತನಾಡಿಮ, ನನ್ನ ಷರತ್ತುಗಳಿಗೆ ಡಿಕೆಶಿ ಸಿದ್ದರಾಮಯ್ಯ ಒಪ್ಪಿದ್ದಾರೆ. ಸಂಜೆ 4 ಗಂಟೆಗೆ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಲಕ್ಷ್ಮಣ್‌ ಸವಧಿಯೂ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದಿವ್ಯಪ್ರಭಾ ಚಿಲ್ತಡ್ಕ  – Vishwanews24

Leave a Reply