ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಬಿಎಸ್​ ಯಡಿಯೂರಪ್ಪ – Vishwanews24

Featured, ರಾಷ್ಟ್ರ ನ್ಯೂಸ್

ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಬಿಎಸ್​ ಯಡಿಯೂರಪ್ಪ

ವದೆಹಲಿ : ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿ, 170 ರಿಂದ 180 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಮುನ್ನ ಸಂಸದೀಯ ಮಂಡಳಿ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿರುವ ಬಿಜೆಪಿ ನಾಯಕರು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ.

ಬೆಳ್ತಂಗಡಿ: ಚಾರ್ಮಾಡಿ ಘಾಟ್‌‌ನಲ್ಲಿ ಕಾರು ಪಲ್ಟಿ – ಗಾಯಗೊಂಡಿದ್ದ ಮಹಿಳೆ ಸಾವು – Vishwanews24

ಭಾನುವಾರ ಸಂಜೆ ದೆಹಲಿಯಲ್ಲಿ ಸುಮಾರು 2 ಗಂಟೆಗಳ ಕಾಲ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ. ಆದರೆ ಪಟ್ಟಿಯನ್ನು ಅಂತಿಮಗೊಳಿಸಲು ಸಾಧ್ಯವಾಗಲ್ಲಿ. ಹೀಗಾಗಿ ಇಂದು ಮತ್ತೊಮ್ಮೆ ಹಿರಿಯ ನಾಯಕರ ಸಭೆ ನಡೆಸಿ 175 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ : ಕಾಪುವಿನ ಯುವಕ ಸಾವು – Vishwanews24

Leave a Reply