ಇಂದೇ ಮುಖ್ಯಮಂತ್ರಿಯಾಗಿ BSY ಪ್ರಮಾಣ ವಚನ ಸ್ವೀಕಾರ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಇಂದು ಸಂಜೆ 6 ಗಂಟೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ನಾನು ಈಗಾಗಲೇ ವಿಪಕ್ಷ ನಾಯಕನಾಗಿರುವುದರಿಂದ ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಅಗತ್ಯವಿಲ್ಲ ಎಂದಿರುವ ಬಿಎಸ್ ವೈ, ನಾಲ್ಕನೇ ಬಾರಿ ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲು ಸಿದ್ಧತೆ ನಡೆಸಿದ್ದಾರೆ.

ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡ ಹಿನ್ನೆಲೆ ಕಳೆದ 3 ದಿನಗಳಿಂದ ಬಿಎಸ್​ವೈ, ಪ್ರಮಾಣವಚನ ಸ್ವೀಕಾರಕ್ಕಾಗಿ ಕಾತರದಿಂದ ಎದುರು ನೋಡುತ್ತಿದ್ದರು. ಆದರೆ ಇದಕ್ಕೆ ಹೈಕಮಾಂಡ್ ಒಪ್ಪಿಗೆ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ ಗುರುವಾರವಷ್ಟೇ ರಾಜ್ಯ ಬಿಜೆಪಿ ನಾಯಕರು ದೆಹಲಿಯಲ್ಲಿ ಹೈಕಮಾಂಡ್​ ಭೇಟಿಯಾಗಿದ್ದರು. ಶುಕ್ರವಾರ ಬೆಳಗ್ಗೆ ಹೈಕಮಾಂಡ್​​ನಿಂದ ಗ್ರೀನ್​ ಸಿಗ್ನಲ್​ ದೊರಕಿದ ಹಿನ್ನಲೆಯಲ್ಲಿ ಆತುರವಾಗಿ ಬಿಎಸ್​ವೈ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧರಾಗುತ್ತಿದ್ದಾರೆ ಎನ್ನಲಾಗಿದೆ.