ಇನ್ನು ಮುಂದೆ ಮಂಗಳೂರು ನಗರದಲ್ಲೂ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ – vishwanews24

ಉಡುಪಿ

ಇನ್ನು ಮುಂದೆ ಮಂಗಳೂರು ನಗರದಲ್ಲೂ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಅಧಿಸೂಚನೆಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಬಹುದಾಗಿದೆ.

ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯ ದಿನಾಂಕ 5-1-1991 ಹಾಗೂ 9-4-1993ರ ಅಧಿಸೂಚನೆ ಕೆ.ಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರವನ್ನು ನಿರ್ಬಂಧಿಸಿತ್ತು. ಈಗ ಅದಕ್ಕೆ ವಿನಾಯಿಯತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಇದನ್ನೂ ಓದಿ:

ಎ.25 ರವರೆಗೆ ಮಂಗಳೂರು ಜಂಕ್ಷನ್-ಮುಂಬೈ ಎಕ್ಸ್‌ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯಯ – vishwanews24

 

ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಕ್ತಿ ಯೋಜನೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಭೇಟಿ ನೀಡುವ ರೋಗಿಗಳಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಂಗಳೂರು ನಗರದ ಕೇಂದ್ರ ಪ್ರದೇಶಗಳಲ್ಲಿ ಸಾರ್ವಜನಿಕ ಸಾಮೂಹಿಕ ಸಾರಿಗೆಯನ್ನು ಉತ್ತೇಜಿಸುವುದು, ಸಾರ್ವಜನಿಕ ಅನುಕೂಲತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುವುದು ಮತ್ತು ಖಾಸಗಿ ವಾಹನಗಳ ಬಳಕೆಯನ್ನು ಕಡಿಮೆ ಮಾಡುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ

 

Leave a Reply